ಹಾಸನ ಸೆ.09 : ಹಾಸನ ಹಾಲು ಒಕ್ಕೂಟದಲ್ಲಿ ನಿರ್ಮಾಣವಾಗಿರುವ ಪೆಟ್ ಬಾಟಲ್ ಉತ್ಪಾದನಾ ಘಟಕ, ಹಾಲು ಪ್ಯಾಕಿಂಗ್ ಹಾಗೂ ಐಸ್ಕ್ರೀಮ್ ಉತ್ಪಾದನಾ ಘಟಕಗಳಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಡಿ ರೇವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಆರ್. ಗಿರೀಶ್, ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರಾರ್ ಮೋಹನ್ ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್, ಅವರು ಇಂದು ಭೇಟಿ ನೀಡಿ ವೀಕ್ಷಿಸಿ ಪರಿಶೀಲಿಸಿದರು.
ಇದೇ ವೇಳೆ ಉಪ ವಿಭಾಗಾಧಿಕಾರಿಗಳಾದ ಪ್ರತೀಕ್ ಬಾಯಲ್, ಬಿ.ಎ ಜಗದೀಶ್, ಹಾಸನ ಹಾಲು ಒಕ್ಕೂಟ ವ್ಯವಸ್ಥಾಪಕರಾದ ಗೋಪಾಲಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ದೇವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಮತ್ತಿತರರು ಹಾಜರಿದ್ದರು.