ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ನೂತನ ಜಿಲ್ಲಾಧಿಕಾರಿಯಾಗಿ ಸಿ.ಸತ್ಯಭಾಮ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಕಂದಾಯ ಇಲಾಖೆಗೆ ಸಂಬಂದಿಸಿದ ದಾಖಲಾತಿಗಳನ್ನು ಸರಿಪಡಿಸಿದಲ್ಲಿ ಸಾಮಾನ್ಯ ಜನರಿಗೆ ಉಪಯೋಗವಾಗು ತ್ತದೆ. ಈ ನಿಟ್ಟಿನಲ್ಲಿ ಮೊದಲ ಅದ್ಯತೆಯ ಮೇಲೆ ಕರ್ತವ್ಯ ನಿರ್ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನ ಮಾಡುವ ಮೂಲಕ ಜನ ಸಾಮಾನ್ಯರಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಜಮೀನು ವಿವಾದಗಳಿಗೆ ಸಂಬಂದಪಟ್ಟಂತೆ ಎ.ಸಿ.ಹಾಗೂ ಡಿ.ಸಿ ಕೋರ್ಟ್ ನಲ್ಲಿರುವ ಪ್ರಕರಣಗಳನ್ನು ಮೂರರಿಂದ ನಾಲ್ಕು ವಿಚಾರಣೆಗಳಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನಿಮ್ಮೆಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು.
ಈ ಹಿಂದೆ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ.ನೂತನ ಅಪರ ಜಿಲ್ಲಾಧಿಕಾರಿ ಶಾಂತಲ ಉಪಸ್ಥಿತರಿದ್ದರು.
****-