ನಾಳೆ 15ಮಾರ್ಚ್ ಹಿಜಾಬ್ ತೀರ್ಪು ಹಿನ್ನೆಲೆ ಹಾಸನ ಜಿಲ್ಲಾದ್ಯಂತ ನಿಷೇಧಾಜ್ನೆ ಜಾರಿ

0

ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ದಿನಾಂಕ: 15-03-2022ರಂದು ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಹೊರಡಿಸಅದ್ದು, ಇದಕ್ಕೆ ಸಂಬಂಧಿಸಿದಂತೆ ಉಲ್ಲೇಖದನ್ವಯ ಮಾನ್ಯ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಕ್ರಮವಹಿಸಲು ನಿರ್ದೇಶಿಸಲಾಗಿರುತ್ತದೆ. ಮುಂದುವರೆದು, ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿ ಧರಣಿ ಮುಂತಾದ ಪ್ರತಿಭಟನೆಗಳು ನಡೆಯುವ ಸಂಭವವಿರುವ ಬಗ್ಗೆ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ, ಹಾಸನ ರವರು ತಿಳಿಸಿರುತ್ತಾರೆ.

ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ದಿನಾಂಕ: 15-03-2022ರ ಬೆಳಗ್ಗೆ 6:00 ರಿಂದ 18-03-2022ರ ರಾತ್ರಿ: 10:00ರವರೆಗೆ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಧರಣಿ, ಪ್ರತಿಭಟನೆ, ಸಂಭ್ರಮಾಚರಣೆ ಹಾಗೂ ಅನವಶ್ಯಕವಾಗಿ ಒಂದೆಡೆ 05 ಜನಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸುವುದು ಸೂಕ್ತವೆಂದು ನನಗೆ ಮನವರಿಕೆಯಾಗಿದ್ದು ಈ ಕೆಳಕಂಡಂತೆ ಆದೇಶಿಸಿದ ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣದಿಂದ ಆರ್. ಗಿರೀಶ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಹಾಸನ ಜಿಲ್ಲೆಯಲ್ಲಿ ಸೆಕ್ಷನ್ 144 ರಡಿಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ ದಿನಾಂಕ: 15-03-2022ರ ಬೆಳಗ್ಗೆ 6:00 ರಿಂದ ಜಾರಿಗೆ ಬರುವಂತೆ ಹಾಗೂ ದಿನಾಂಕ: 18-03-2022ರ ರಾತ್ರಿ: 10:00ರವರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಯಾವುದೇ ಧರಣಿ, ಪ್ರತಿಭಟನೆ, ಸಂಭ್ರಮಾಚರಣೆ ಹಾಗೂ ಅನವಶ್ಯಕವಾಗಿ ಒಂದೆಡ ಐದು ಜನಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಭಂದಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ.

LEAVE A REPLY

Please enter your comment!
Please enter your name here