ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆ ಹಾಸನ SP ಖಡಕ್ ಆಜ್ಞೆ

0

ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಪೊಲೀಸರೇ ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ , ಬರುತ್ತಲೇ ಇದೆ . ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿ ವಾಹನ ಚಲಾಯಿಸುವಾಗ

ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಸಂಚಾರಿ ನಿಯಮದ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಹೆಲ್ಮೆಟ್ ಧರಿಸದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸರಿಗೆ ಹರಿರಾಂ ಶಂಕರ್ ಸೂಚನೆ , ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ

ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್‍ಪಿ (SP) ಎಚ್ಚರಿಕೆ ನೀಡಿ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಹಾಗೂ ಸಂಚಾರಿ ನಿಯಮ ಪಾಲನೆ ಮಾಡದ ವಾಹನ ಸವಾರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವುದು ಸಹ ಪೊಲೀಸರ ಕರ್ತವ್ಯ ಎಂದು ತಿಳಿಸಿದ್ದಾರೆ., ಪೊಲೀಸ್  ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್  ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ

ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here