ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ರವರ ಕಛೇರಿ, ಕರ್ನಾಟಕ ರಾಜ್ಯ ಬೆಂಗಳೂರು ಪ್ರಕಟಣೆ : ದಿನಾಂಕ: 12.07.22 , ಈ ಕೆಳಕಂಡ ಪೊಲೀಸ್ ಅಧೀಕ್ಷಕರು (ಸಿವಿಲ್) (ನಾನ್ ಐಪಿಎಸ್) ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ.
ಸಂಬಂಧಪಟ್ಟ ಘಟಕಾಧಿಕಾರಿಗಳು ಈ ಮೇಲ್ಕಂಡ ಅಧಿಕಾರಿಯವರುಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ಕೂಡಲೇ ಬಿಡುಗಡೆಗೊಳಿಸಿ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲು ಕೋರಿದೆ. ಕರ್ತವ್ಯದಿಂದ ಬಿಡುಗಡೆಗೊಳಿಸಿದ ಹಾಗೂ ಕರ್ತವ್ಯಕ್ಕೆ ವರದಿಮಾಡಿಕೊಂಡ ಬಗ್ಗೆ ಈ ಕಛೇರಿಗೆ ಪಾಲನಾ ವರದಿಯನ್ನು ಸಲ್ಲಿಸುವುದು. ಡಿಜಿ ಮತ್ತು ಐಜಿಪಿ ರವರಿಂದ ಅನುಮೋದಿಸಲ್ಪಟ್ಟಿದೆ
ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಡಿವೈ.ಎಸ್.ಪಿ. (ಸಿವಿಲ್) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಅಧಿಕಾರಿಗೆ ವೇತನ ಶ್ರೇಣಿ ರೂ.70,850-1,07,100 ಎಸ್.ಪಿ. (ಸಿವಿಲ್) (ನಾನ್-ಐಪಿಎಸ್) ವೃಂದಕ್ಕೆ ಸ್ಥಾನಪನ್ನ ಮುಂಬಡ್ತಿ ನೀಡಿ, ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ,
ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಎಸ್.ಪಿ. (ಸಿವಿಲ್) (ನಾನ್-ಐಪಿಎಸ್) ವೃಂದದ ಕೆಳಕಂಡ ಅಧಿಕಾರಿಗಳಿಗೆ ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ಅಂತೆಯೇ ಹಾಸನ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ “ಎಂ.ಕೆ ತಮ್ಮಯ್ಯ” ಅವರು ಅಧಿಕಾರ ವಹಿಸಿಕೊಂಡರೆ : ಹಾಸನದಲ್ಲಿ ಅಡಿಷನಲ್ ಎಸ್ ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ ಎನ್ ನಂದಿನಿ ಮೈಸೂರು ಜಿಲ್ಲೆಗೆ ವರ್ಗಯಾಗಿದ್ದಾರೆ .