ಮಾತನಾಡಿರುವುದು ನಿಜ ; ಟಿಕೆಟ್ ಕೊಟ್ಟರೆ ಸ್ಪರ್ಧೆ ಖಚಿತ
ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜೆಡಿಎಸ್‌ನ ವರಿಷ್ಠರು ನನ್ನ ಜೊತೆ ಮಾತನಾಡಿರುವುದು ನಿಜ. ಎಲ್ಲರೂ ಒಮ್ಮತದಿಂದ ನನಗೆ ಟಿಕೆಟ್ ಕೊಟ್ಟರೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಕೆ.ಎಂ.ರಾಜೇಗೌಡರು ಪತ್ರಿಕೆಗೆ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಹಿರಿಯ ಮುಖಂಡನಾಗಿದ್ದೇನೆ. ನಾನು ಈ ಹಿಂದೆ ಕಾಂಗ್ರೆಸ್‌ನಿಂದ 2 ಬಾರಿ ಸ್ಪರ್ಧಿಸಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದೆ. ನಂತರ ದೇವೇಗೌಡರ ನಾಯಕತ್ವ ಮೆಚ್ಚಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದೆ. ನಂತರ ಟಿಕೆಟ್‌ಗಾಗಿ ಕೆಲ ಸಲ ಮನವಿ ಮಾಡಿದ್ದೆ. ಆದರೆ ಹೆಚ್.ಎಸ್.ಪ್ರಕಾಶ್ ಅವರಿಗೆ ಟಿಕೆಟ್ ನೀಡುವುದರಿಂದ ನನಗೆ ನಿರಾಕರಿಸಿದ್ದರು. ಆದರೂ ನಾನು ಪಕ್ಷದಲ್ಲಿ ಸಾಮಾನ್ಯ ಕಾರಕರ್ತನಂತೆ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಆದರೆ ಈ ಬಾರಿ ಟಿಕೆಟ್‌ಗಾಗಿ ಭವಾನಿ ರೇವಣ್ಣ ಮತ್ತು ಸ್ವರೂಪ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟ ಹಿನ್ನೆಲೆಯಲ್ಲಿ ನಾನು ಬೇಡಿಕೆ ಇಟ್ಟಿರಲಿಲ್ಲ. ಆದರೆ ನನ್ನ ಹಿರಿತನ ಮತ್ತು ಪಕ್ಷಕ್ಕೆ ನನ್ನ ಸೇವೆಯನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಮಾತುಕತೆಯೂ ನಡೆದಿದ್ದು, ಎಲ್ಲರೂ ಒಮ್ಮತದಿಂದ ನನಗೆ ಸಹಕರಿಸಿದರೆ ಚುನಾವಣೆಗೆ ಸ್ಪಧಿಸುತ್ತೇನೆ ಎಂದರು,
ಈಗಾಗಲೇ ಪಕ್ಷದ ವರಿಷ್ಠರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡುತ್ತೇವೆ. ಒಂದು ವೇಳೆ ನನಗೆ ಟಿಕೆಟ್ ನೀಡಿದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು ಮತ್ತೊಮ್ಮೆ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಬಾವುಟವನ್ನು ಹಾರಿಸುತ್ತೇನೆ ಎಂದರು ವಿಶ್ವಾಸ ವ್ಯಕ್ತ ಪಡಿಸಿದರು