ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಎಚ್ ಯೋಗಾರಮೇಶ್ ಕಾಂಗ್ರೆಸ್ ತೊರೆದು ಪುನಃ ಬಿಜೆಪಿ ಸೇರ್ಪಡೆ

0

ಅರಕಲಗೂಡು ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಎಚ್ ಯೋಗಾರಮೇಶ್ ಕಾಂಗ್ರೆಸ್ ತೊರೆದು ಪುನಃ ಬಿಜೆಪಿ ಸೇರ್ಪಡೆ…

ಬಿಜೆಪಿ ರಾಜ್ಯ ಅಧ್ಯಕ್ಷರಾದ
ನಳೀನ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಎಚ್ ಯೋಗಾರಮೇಶ್ ಇಂದು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಕೆಲದಿನಗಳಿಂದ ರಾಜಕೀಯದಿಂದ ದೂರವಿದ್ದ ಯೋಗಾರಮೇಶ್ ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎಚ್ ಕೆ ಸುರೇಶ್, ಬಿಜೆಪಿ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here