ಹಾಸನ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2021

0

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ : ನ್ಯಾ. ನಾರಾಯಣ ಪ್ರಸಾದ್

ಹಾಸನ ಮಾ.05 :  ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು ಹಾಗೂ ವೃತ್ತಿಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಕ್ರೀಡೆ ಹೆಚ್ಚು ಸಹಕಾರಿಯಾಗಲಿದೆ ಎಂದು 2ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾರಾಯಣ ಪ್ರಸಾದ್ ಅವರು ತಿಳಿಸಿದ್ದಾರೆ.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪೊಲೀಸರ ಆರೋಗ್ಯ ಪೊಲೀಸರಿಗಿಂತ ಹೆಚ್ಚಾಗಿ ಸಮಾಜಕ್ಕೆ ಬಹುಮುಖ್ಯವಾದದ್ದು ಎಂದು ಹೇಳಿದರು.

ಪೊಲೀಸರು ಕೆಲ ಸಮಯವಾದರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ್ದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಲ್ಲಿ ಚೇತರಿಕೆ ಹಾಗೂ ಚೈತನ್ಯ ತುಂಬಲಿದೆ ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಸರ್ಕಾರದ ಅನೇಕ ಇಲಾಖೆಗಳು ಹಾಗೂ ಕಂದಾಯ ಮತ್ತು ಪೊಲೀಸ್ ಇಲಾಖೆ ನಾನಾ ಸಂದರ್ಭದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಹೆಚ್ಚಾಗಿ ಚುನಾವಣೆ ಸಂದರ್ಭದಲ್ಲಿ ಕಂದಾಯ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾದುದು. ಕೆಲಸದ ಒತ್ತಡವನ್ನು ಮರೆತು ಕ್ರೀಡೆಯ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಮಾತನಾಡಿ ಕ್ರೀಡೆ ಮನಸ್ಸಿಗೆ  ಆತ್ಮ ಸ್ಥೈರ್ಯ ನೀಡುವ ಜೊತೆಗೆ ಆರೋಗ್ಯವನ್ನು ಸದೃಢವಾಗಿಡಲು ಸಹಕಾರಿಸುತ್ತದೆ ಎಂದರು.

ಕರ್ತವ್ಯ ನಿರ್ವಹಿಸುವ ವೇಳೆ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸುವುದಿಲ್ಲ ಕೆಲಸದ ಜೊತೆ ಜೊತೆಗೆ ನಮ್ಮ ಆರೋಗ್ಯ ರಕ್ಷಣೆ ಮುಖ್ಯ ನಮ್ಮೊಂದಿಗೆ ಕುಟುಂಬವು ಇದೆ ಎಂಬುದು ಮರೆಯಬಾರದ ಈ ನಿಟ್ಟಿನಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಪೊಲೀಸ್ ಇಲಾಖೆಯು ಬಹಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ ಯಾವುದೇ ಹಬ್ಬಗಳು ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು  ಸಾದ್ಯವಾಗುವುದಿಲ್ಲ. ಉತ್ತಮ ಜೀವನಕ್ಕೆ ಕ್ರೀಡೆಯನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಗಿರಹುದು ಎಂದು ತಿಳಿಸಿದರು.
     
ಕಾರ್ಯಕ್ರಮದಲ್ಲಿ ರಾಷ್ಟೀಯ ಬ್ಯಾಸ್ಕೆಟ್ ಆಟಗಾರ್ತಿ ಮೇಕಲಾಗೌಡ ,ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ,  ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here