ಹಾಸನ ಜಿಲ್ಲೆಯ ಈ ಕೆಳಕಂಡ ಪ್ರವಾಸೋದ್ಯಮ ಪ್ರದೇಶಗಳಲ್ಲಿ ಪ್ಯಾರಗ್ಲೈಡಿಂಗ್ ಶೀಘ್ರದಲ್ಲೇ

0

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ‌ ಹೊಸ ಯೋಜನೆಗೆ ಅಸ್ತು

ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಬರುವವರಿಗೆ ಹೆಚ್ಚಿನ ಮನರಂಜನೆ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲು ಕಾನೂನು ನಿಬಂಧನೆಗಳನ್ನು ಮೀರದೆ ಅವಕಾಶ

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಉದ್ದೇಶದಿಂದ ಸಾಹಸ ಕ್ರೀಡೆಯಾದ ಪ್ಯಾರಾಗ್ಲೈಡಿಂಗ್‍ ಅನ್ನು ನಿಬಂಧನೆಗಳಿಗೆ ಒಳಪಟ್ಟು ಪ್ರಾರಂಭಿ ಸಲು ಜಿಲ್ಲಾಧಿಕಾರಿ ಆರ್. ಗಿರೀಶ್ ಅನುಮತಿ

ಸಕಲೇಶಪುರ ತಾಲ್ಲೂಕಿನ ಹೊಸಹಳ್ಳಿ ಬೆಟ್ಟ, ಪಟ್ಲ ಬೆಟ್ಟದಲ್ಲಿ ಪ್ಯಾರಾ ಗ್ಲೈಡಿಂಗ್‌ಗೆ ವ್ಯವಸ್ಥೆ , ಇದಕ್ಕಾಗಿ ಕ್ರೀಡಾ ಇಲಾಖೆಯ ಜನರಲ್ ತಿಮ್ಮಯ್ಯ ಅಕಾಡೆಮಿಯಿಂದ ಅರ್ಹತಾ ಪ್ರಮಾಣಪತ್ರ , ಹಾಗೂ ಜೊತೆಗೆ ಸಾಹಸ ಕ್ರೀಡೆ ಪ್ರಾರಂಭಿಸುವ ಸ್ಥಳವು ದಟ್ಟ ಅರಣ್ಯ ಪ್ರದೇಶವಾಗಿರುವುದರಿಂದ ಅರಣ್ಯ ಇಲಾಖೆ ಅನುಮತಿ ಪಡೆಯಲು ಸಮಿತಿ

ಸಭೆಯಲ್ಲಿ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಕೆ.ಎನ್. ಬಸವರಾಜ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಸಂಜಯ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ನಗರಸಭೆ ಆಯುಕ್ತ ಪರಮೇಶ್ವರಪ್ಪ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್ ಹಾಜರು

LEAVE A REPLY

Please enter your comment!
Please enter your name here