ಹಾಸನಾಂಬ ಜಾತ್ರಾ ಮಹೋತ್ಸವ; ಸಿದ್ದತೆಗೆ ಸೂಚನೆ

0

ಹಾಸನ ಅ.23 : ಹಾಸನಾಂಬ ಜಾತ್ರಾ ಮಹೋತ್ಸವವನ್ನು ಸುಲಲಿತವಾಗಿ ನಡೆಸಲು ಅಗತ್ಯ ಸಿದ್ದತೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಸನಾಂಬ ದೇವಾಲಯಕ್ಕಿಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು ಹೂವಿನ ಅಲಂಕಾರ, ದೀಪಾಲಂಕಾರ, ಬ್ಯಾರಿಕೆಡ್ ಅಳವಡಿಕೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ಆಕರ್ಷಕವಾಗಿ ಮಾಡುವುದರ ಜೊತೆಗೆ ಕೋವಿಡ್ ಲಸಿಕೆ ಪಡೆಯಿರಿ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಎಂಬ ವ್ಯಾಕ್ಯಗಳನ್ನು ವಿದ್ಯುತ್ ದೀಪಗಳಿಂದ ಮೂಡಿಬರುವಂತೆ ವ್ಯವಸ್ಥಿತವಾಗಿ ಮಾಡಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ  ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಉಪವಿಭಾಗಾಧಿಕಾರಿ ಜಗದೀಶ್, ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ, ಡಿ.ವೈ.ಎಸ್.ಪಿ ಪುಟ್ಟಸ್ವಾಮಿ ಗೌಡ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಶ್, ತಹಸೀಲ್ದಾರ್ ನಟೇಶ್, ನಗರ ಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here