ಹಾಸನದಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿ ಡಿಸಿ ಅದೇಶ

0

ಸೆಕ್ಷನ್ 144 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರೋನಾ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದೇ ಸೆ. : ದಿನಾಂಕ:03/09/2021ರ ರಾತ್ರಿ 9:00 ರಿಂದ ದಿನಾಂಕ:06/09/202ರ ಬೆಳಗ್ಗೆ 5:00 ಗಂಟೆಯವರೆಗೆ ಹಾಗೂ ದಿನಾಂಕ:10/09/2021ರ ರಾತ್ರಿ 9:00 ರಿಂದ ದಿನಾಂಕ:13/09/2021ರ ಬೆಳಗ್ಗೆ 5:00 ಗಂಟೆಯವರೆಗೆ ಎರಡು ವಾರಗಳಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಿ ಆದೇಶಿಸಿದೆ. ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಸತಕ್ಕದ್ದು.

• ಹಾಸನ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳು !

ಈ ಕೆಳಗೆ ಸೂಚಿಸಿದಂತೆ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಟುವಟಿಕೆಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 9:00 ಗಂಟೆಯಿಂದ ಸೋಮವಾರ ಬೆಳಗ್ಗೆ 5:00 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ

• ತುರ್ತು ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಛೇರಿಗಳು ಮತ್ತು ಅವುಗಳ ಸ್ಥಾಯತ್ತ ಸಂಸ್ಥೆಗಳು ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ/ಸಿಬ್ಬಂದಿಗಳಿಗೆ ಅನಿರ್ಬಂಧಿತ ಓಡಾಟಕ್ಕೆ ಅವಕಾಶ ನೀಡತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

> ತುರ್ತು ಮತ್ತು ಅತ್ಯಾವಶ್ಯಕ ಸೇವೆಗಳನ್ನು ನಿರ್ವಹಿಸುವ ಮತ್ತು 24×7 ಕಾರ್ಯಚರಣಿಗಳನ್ನು ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳು/ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿಸಿದ ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ/ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸತಕ್ಕದ್ದು, ಆದರೆ ಸಾಧ್ಯವಾದಷ್ಟು ಮಟ್ಟಿಗೆ ನೌಕರರನ್ನು ಮನೆಯಿಂದಲೇ ಕಾರ್ಯನಿರ್ವಹಿಸುವುದಕ್ಕೆ ಪ್ರೋತ್ಸಾಹಿಸಬೇಕು.

> ದೂರಸಂಪರ್ಕ ಮತ್ತು ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರ ಅವರ ಸಂಬಂಧಪಟ್ಟ ಸಂಸ್ಥೆ/ ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿ ಹಾಜರುಪಡಿಸಿದ ನಂತರ ಅನುಮತಿಸತಕ್ಕದ್ದು.

• ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪನಿಗಳು/ಸಂಸ್ಥೆಯ ಅತ್ಯಾವಶ್ಯಕ ಸಿಬ್ಬಂದಿ/ನೌಕರರು ಮಾತ್ರ ಕಛೇರಿಯಿಂದ ಕಾರ್ಯನಿರ್ವಹಿಸತಕ್ಕದ್ದು , ಸಿಬ್ಬಂದಿಯು ಮನೆಯಿಂದ ಕಾರ್ಯ ನಿರ್ವಹಿಸುವುದು.

> ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುರುವ ರೋಗಿಗಳು ಅವರ ಪರಿಚಾರಕರು/ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ದಾಖಲೆಗಳನ್ನು ಹಾಜರುಪಡಿಸಿ ಸಂಚರಿಸಲು ಅನುಮತಿಸತಕ್ಕದ್ದು.

> ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ರರು ಆಹಾರದ ಅಂಗಡಿಗಳಗೆ ಬೆಳಗ್ಗೆ 5:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

• ಆಹಾರ , ದಿನಸಿ , ಹಣ್ಣು ಮತ್ತು ತರಕಾರಿಗಳು ,ಮಾಂಸ ಮತ್ತು ಮೀನು , ಪಶು ಅಂಗಡಿಯ ವ್ಯಾಪಾರಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಅನುಮತಿಸಲಾಗಿದೆ , ಪ್ರತ್ಯೇಕ ಮದ್ಯದಂಗಡಿಗಳು ಮತ್ತು ಔಟ್ಲೆಟ್‌ಗಳು ಬೆಳಗ್ಗೆ 5:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಪಾರ್ಸೆಲ್ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಸತಕ್ಕದ್ದು ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24×7 ಅವಧಿಯಲ್ಲಿ ಎಲ್ಲಾ ಕಾರ್ಯಾಚರಣೆಗಳು ಕೋವಿಡ್ 19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಒಳಪಟ್ಟಿರತಕ್ಕದ್ದು.

> ಡೈರಿ ಮತ್ತು ಹಾಲಿನ ಬೂತುಗಳು ಬೆಳಗ್ಗೆ 5:00 ಗಂಟೆ ರಾತ್ರಿ 9:00 ರವರೆಗೆ ಕಾರ್ಯಾಚರಿಸಲು ಅನುಮತಿಸಿದೆ.

> ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳಲ್ಲಿ ಆಹಾರವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿ ನೀಡಲು ಮಾತ್ರ ಅನುಮತಿಸಿದೆ

> ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರು ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣ ಬಸ್ ಟರ್ಮಿನಲ್ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಧಿಕೃತ ಪ್ರಯಾಣ ದಾಖಲೆ ಅಥವಾ ಟಿಕೇಟ್ ಅನ್ನು ಪ್ರದರ್ಶಿಸಿದ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಸಿದ ನಂತರವೇ ಅಂತಹ ಸಂಚಾರಕ್ಕೆ ಅನುಮತಿ ನೀಡತಕ್ಕದ್ದು.

ಈಗಾಗಲೇ ನಿಗಧಿಯಾಗಿರುವ ಮತ್ತು ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಸಿ ಗರಿಷ್ಠ 100 ಜನರಿಗೆ ಮೀರದಂತೆ ಭಾಗವಹಿಸಲು ಅನುಮತಿಸಿದೆ.

> ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಸಿ ಗರಿಷ್ಠ 20 ಜನರು ಮಾತ್ರ ಭಾಗವಹಿಸಲು ಅನುಮತಿಸಿದೆ.

ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ತಿಳಿಸಿರುವ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 31 ಭಾರತೀಯ ದಂಡ ಸಂಹಿತೆ ಸೆಕ್ಷನ್ 1884 ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದು ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ನಿಷೇದಾಜ್ಞೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯ ಕ್ರಮ ಕೈಗೊಳ್ಳಲುಬ ಇಲಾಖೆಗೆ ಆದೇಶಿಸಿದೆ.

LEAVE A REPLY

Please enter your comment!
Please enter your name here