ಆಮ್ಲಜನಕ ಹಾಗೂ ರೆಮ್ ಡಿಸಿವರ್ ಚುಚ್ಚುಮದ್ದು ನಿರ್ವಹಣೆಯಲ್ಲಿ ಮುಂಜಾಗ್ರತೆ ವಹಿಸುವಂತೆ ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥ್ ನಾರಾಯಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಇಂದು ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು ಹಿಮ್ಸ್ ನಿರ್ದೇಶಕರು ಪ್ರತಿ ನಿತ್ಯ ಆಸ್ಪತ್ರೆಗೆ ಹೋಗಿ ರೌಂಡ್ಸ್ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಈವರೆಗೆ ಏಳು ಜನರಲ್ಲಿ ಬ್ಲಾಕ್ ಫಂಗಸ್ ಸೊಂಕು ಪತ್ತೆಯಾಗಿದೆ ಇಂದು ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ. ಆರು ಜನರರಲ್ಲಿ ಓರ್ವ ರೋಗಿ ಬಿಟ್ಟು ಉಳಿದ ಐದು ಜನರನ್ನು ನಿಗದಿತ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು ನಂತರ ಮಾತನಾಡಿದ ಅವರು ಗರಿಷ್ಠ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿದರು.
ವೈದ್ಯಕೀಯ ಸಿಬ್ಬಂದಿಗಳನ್ನು ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ ನೇಮಿಸಿ ಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮಾತನಾಡಿ ಹೆಚ್ಚುವರಿ ಆಮ್ಲಜನಕಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದರು .
ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಅವೈಜ್ಞಾನಿಕವಾಗಿದೆ .ಇದರಿಂದ ಸೋಂಕಿನ ಸಂಖ್ಯೆ ಹೆಚ್ಚು ಹರಡುತ್ತದೆ .ಆದ್ದರಿಂದ ಎಲ್ಲಾ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಿ ಎಂದು ಒತ್ತಾಯಿಸಿದರು.
ವಿಧಾನಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರು ಮಾತನಾಡಿ ಕೋವಿಡ್ ತಡೆಗಟ್ಟುವುದರ ಜೊತೆಗೆ ಬ್ಲಾಕ್ ಪೊಂಗಸ್ ಕಾಯಿಲೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.
ಶಾಸಕರಾದ ಪ್ರೀತಂ ಜೆ ಗೌಡ ಅವರು ಮಾತನಾಡಿ ಜಿಲ್ಲೆಯಲ್ಲಿ ಲಭ್ಯವಿರುವ ಆಮ್ಲಜನಕವನ್ನು ಬಳಸಿಕೊಂಡು ಅಧಿಕಾರಿಗಳು ಕೋವಿಡ್ ನಿರ್ವಹಣೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದರ ಜೊತೆಗೆ ಗ್ರಾಮ ಮಟ್ಟದಲ್ಲೂ ತೀವ್ರ ನಿಗಾವಹಿಸುತ್ತಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಬಿ. ಎ.ಪರಮೇಶ್, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್ ,ಹಿಮ್ಸ್ ನಿರ್ದೇಶಕ ರಾದ ಡಾ.ರವಿಕುಮಾರ್ , ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಕೃಷ್ಣ ಮೂರ್ತಿ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ.ಸತೀಶ್ ಹಾಗೂ ಮತ್ತಿತರರು ಹಾಜರಿದ್ದರು.