ಲಸಿಕೆ ನೀಡುವುದರ ಮೂಲಕ ಕೋವಿಡ್ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚನೆ

0

ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುವ ಸ್ಥಳಗಳಲ್ಲಿ ಹೆಚ್ಚು ಲಸಿಕೆ ನೀಡುವುದರ ಮೂಲಕ ಕೊರೋನಾ ಹರಡದಂತೆ ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-೧೯ ನಿಯಂತ್ರಣಕ್ಕೆ ಸಂಬಧಿಸಿದಂತೆ ತಹಶೀಲ್ದಾರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ ಅವರು ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ನೀಡಿ ಎಂದರಲ್ಲದೆ ಪ್ರಾಥಮಿಕ ಸಂಪರ್ಕಿತರ ಪತ್ತೆಕಾರ್ಯ ಚುರುಕುಗೊಳಿಸಿ ಎಂದರು.
೧೮ ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವಂತೆ ನಿರ್ದೇಶನ ನೀಡಿದರು.

೫ ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ಕಂಟೈನ್ಮೆಂಟ್ ವಲಯ ಎಂದು ಗುರುತಿಸಿ ಎಂದರಲ್ಲದೆ ಮನೆಯ ಬಳಿ ಚೀಟಿ ಅಂಟಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದ ಅವರು ಕೋವಿಡ್‌ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವರರ ಪಟ್ಟಿಯನ್ನು ಶೀಘ್ರವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಹೇಳಿದರು.ಮೂರನೇ ಅಲೆ ಅಪ್ಪಳಿಸುವ ಮುನ್ಸೂಚನೆ ಇದ್ದು ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಶೌಚಲಯ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ದುರಸ್ಥಿಯಲ್ಲಿದ್ದರೆ ಸರಿಪಡಿಸಲು ೧೦ ಲಕ್ಷ ಮಿತಿಯೊಳಗೆ ಸರಿಪಡಿಸಲು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹೇಳಿದರು. ಇದೇ ವೇಳೆ ಜಿಲ್ಲೆಯಲ್ಲಿ ಈಗಾಗಲೇ ೫೦೦ ಕೆರೆಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದ್ದು, ಅವುಗಳನ್ನು ತೆರವುಗಳಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರಲ್ಲದೆ ಸ್ಮಶಾನಕ್ಕೆ ಜಾಗವಿಲ್ಲದೆ ಗ್ರಾಮಗಳಿಗೆ ಭೂಮಿ ಒದಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಮಾತನಾಡಿ ಅವರು ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಹಾಗೂ ಲಸಿಕೆ ವರದಿಯನ್ನು ನಿಖರವಾದ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದರಲ್ಲದೆ ನಿಗದಿತ ಆರ್.ಟಿ.ಪಿಸಿ.ಆರ್ ಪರೀಕ್ಷೆ ಗುರಿಯನ್ನು ಸಾಧಿಸಿ ಪಾಸಿಟಿವಿಟಿ ದರವನ್ನು ಕಡಿಮೆಗೊಳಿಸಲು ಹೆಚ್ಚಿನ ನಿಗಾವಹಿಸಿ ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಕುಮಾರ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಹೇಮಲತಾ, ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ|| ಸತೀಶ್, ಆರ್.ಸಿ.ಎಚ್. ಅಧಿಕಾರಿ ಡಾ|| ಕಾಂತರಾಜ್ ಮತ್ತಿತರರು ಹಾಜರಿದ್ದರು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅದೇ ಗ್ರಾಮದ ಅಭ್ಯರ್ಥಿಗಳಾಗಿದ್ದು, ವಯೋಮಿತಿ ೧೮ ರಿಂದ ೩೫ ವರ್ಷದೊಳಗಿದ್ದು, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್ ಸಿ ಹಾಗೂ ಅಂಗನವಾಡಿ ಸಹಾಯಕಿಯ ಹುದ್ದೆಗೆ ಕನಿಷ್ಠ ನಾಲ್ಕರಿಂದ ೯ನೇ ತರಗತಿ ಉತ್ತೀರ್ಣರಾಗಿರುವವರನ್ನು ಪರಿಗಣಿಸಲಾಗುವುದು ಎಂದು ಅರಕಲಗೂಡು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here