ಹಾಸನ : ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಶ್ರೀನಿವಾಸ್ ಗೌಡ ಐಪಿಎಸ್ ಅವರು ರಾತ್ರಿ ವೇಳೆ ಗಸ್ತು ತಿರುಗುವ ಪೊಲೀಸರಿಗೆ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಸಿಬ್ಬಂದಿಗಳಿಗೆ ಅಪಾಯವಾದಾಗ ಹೇಗೆ ಅವರ ಸಂರಕ್ಷಣೆಯನ್ನು ಮಾಡಿಕೊಳ್ಳಬೇಕು ಎಂಬ ವಿವರಣೆಯನ್ನು ಕೂಡ ನೀಡಿದರು. ರಾತ್ರಿ ಸಮಯದಲ್ಲಿ ಅನಾವಶ್ಯಕವಾಗಿ ಓಡಾಡುವ ಪೋಲಿ ಪುಂಡರು ಗಳು, ಕುಡುಕರು, ಮನೆಗಳ್ಳತನ ಮಾಡುವ ಕಳ್ಳರನ್ನು ಹಾಗೂ ಇನ್ನಿತರ ಯಾವುದೇ ಅಪರಾಧ ಪ್ರಕರಣಗಳು ನಡೆಯದಂತೆ ಹೇಗೆ ನೋಡಿಕೊಳ್ಳಬೇಕೆಂದು ತಿಳಿಸಿದರು ಇದು ನಮ್ಮ ಕರ್ತವ್ಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟಿರುತ್ತಾರೆ.
