ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅವರ ವಿರುದ್ಧ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರಿಂದ ಸೂರಜ್ ರೇವಣ್ಣ ಹೆಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗುವ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ನೇರವಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ