ಚುನಾವಣೆ ಬಗ್ಗೆ ಭವಿಷ್ಯ ನುಡಿಯಲು ಕೊರವಂಜಿಗಳಿದ್ದಾರೆ: ರೇವಣ್ಣ ವ್ಯಂಗ್ಯ

0

ಹಾಸನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂಬ ಭವಿಷ್ಯ ನುಡಿಯಲು ನಮ್ಮಬಳಿ ಕೊರವಂಜಿಗಳಿದ್ದಾರೆ ಎಂದು ಹಾಸನದಲ್ಲಿ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಇದೇ ವೇಳೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಡಿಕೆಶಿ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ಕುರಿತಾಗಿ ಭವಿಷ್ಯ ಹೇಳಲು ನಮ್ಮಬಳಿ ಮೂವರು ಕೊರವಂಜಿಗಳಿದ್ದಾರೆ. ದೊಡ್ಡವರ ಕಥೆ ನಾನೇನು ಹೇಳಲ್ಲ ಎಂದಿದ್ದಾರೆ

ಸರ್ಕಾರ ಕೂಡಲೇ ಕೊರೊನಾ ಮೂರನೇ ಅಲೆ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಹಾಸನ ಜಿಲ್ಲಾಧಿಕಾರಿ ಈಗಾಗಲೇ ಮೂರನೇ ಅಲೆಗೆ ಏನುಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿದ್ದಾರೆ. ಆದರೆ ಸರ್ಕಾರ ಇದುವರೆಗೂ ಏನನ್ನೂ ಮಾಡಿಲ್ಲ. ಮೂರನೇ ಅಲೆ ವೇಗವಾಗಿ ಹಬ್ಬುತ್ತಿದ್ದು, ಸರ್ಕಾರ ಕೂಡಲೇ ಎಲ್ಲಾ ಆಸ್ಪತ್ರೆಗಳಲ್ಲೂ ಕನಿಷ್ಟ ನೂರು ಬೆಡ್ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಕಳುಹಿಸಿಕೊಟ್ಟಿರುವ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here