ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಹಾಸನದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

0

ಹಾಸನ / ಮೈಸೂರು : ದಿನಾಂಕ 7.8.2021ರಂದು ನಡೆದ ಮೈಸೂರು ವಿಶ್ವವಿದ್ಯಾಲಯದ 101ನೇ ಘಟಕೋತ್ಸವದ ಸಮಾರಂಭದಲ್ಲಿ ಮಿಂಚಿದ ಹಾಸನದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರು!!

(ಬಿ ಎಸ್ಸಿ) ಗೃಹ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ಮೇಘನ ಪಿ ಪ್ರಥಮ ರಾಂಕ್ ನೊಂದಿಗೆ ಎರಡು ಚಿನ್ನದ ಪದಕಗಳಿಗೆ ತಮ್ಮ ಕೊರಳನ್ನೊಡ್ಡಿದರೆ, ಕು. ಶಿಫ ಸೆನಿನ್ ಒಂದು ಚಿನ್ನದ ಪದಕವನ್ನು ಗೃಹ ವಿಜ್ಞಾನ ವಿಭಾಗದಲ್ಲಿ ತಮ್ಮದನ್ನಾಗಿಸಿಕೊಂಡಿದ್ದಾರೆ.
ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಆಡಳಿತವರ್ಗ ತಮ್ಮ ಅಭಿಮಾನದ ಅಭಿನಂದನೆಗಳನ್ನು ಈ ಮೂಲಕ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here