ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ

0

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 25-06-2023 01-07-2023ರವರೆಗೆ ಅಮ್ಮಗೋಡನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದ ಉದ್ಘಾಟನೆಯನ್ನು ನೆರವೆರಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಎಸ್.ದ್ವಾವೇಗೌಡರು ವೈದ್ಯೋ ನಾರಾಯಣ ಹರಿ” ಎನ್ನುವ ಮೂಲಕ ವೈದ್ಯರು ದೇವರಿಗೆ ಸಮಾನ ಮತ್ತು ಹಿಮ್ಸ್ ಸಂಸ್ಥೆಯ ವೈದ್ಯರು ಈ ಗ್ರಾಮಕ್ಕೆ ಬಂದು ಜನರ ಸೇವೆಯನ್ನು ಮಾಡುವ ಮೂಲಕ ಗ್ರಾಮದ ಜನರಿಗೆ ಅನುಕೂಲವಾಗುವ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಂಡಿರುವುದು ಸಂತೋಷದ ವಿಷಯ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹಿಮ್ಸ್ ಸಂಸ್ಥೆಯ ಪ್ರಭಾರಿ ನಿರ್ದೇಶಕರಾದ ಡಾ||ಕೃಷ್ಣಮೂರ್ತಿ.ವಿ/ಆರ್, ಇವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಗ್ರಾಮಸ್ಥರು ವೈದ್ಯರ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳುವಲ್ಲಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ರೋಗಲಕ್ಷಣ

ಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರಾದ ಡಾ|ಮುರುಷೋತ್ತಮ್, ದಂತವೈದ್ಯಕೀಯ ವಿಭಾಗದ ಬೊಧಕರಾದ ಡಾ>ಕಾವೃ.ಜಿ, ವಕೀಲರಾದ ಶೇಷಾದ್ರಿ, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಯುತ ಯೋಗ ಶೆಟ್ಟಿ, ಶ್ರೀಮತಿ ಜಯಮ್ಮ ಶ್ರೀ. ರಮೇಶ್, ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಹಿಮ್ಸ್‌ನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ.ನಿಚಿತಾ ಕುಮಾರಿ ಇವರು ನೆರವೆರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ 2023ನೇ ಸಾಲಿನಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಸ್ವಯಂಸೇವಕರಿಂದ ಮತ್ತು ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಈ ಶಿಬಿರದಲ್ಲಿ ಒಟ್ಟು 40 ಜ0 ಹಿಮ್ಸ್‌ನ ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here