ಹಾಸನದ ಹಿಮ್ಸ್ ಗೆ ಪ್ರತಿಷ್ಠಿತ ಉತ್ತಮ ಎನ್.ಎಸ್.ಎಸ್ ಘಟಕ ಪ್ರಶಸ್ತಿ

0

ಹಾಸನ ಅ.16 :  ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಕ್ಕೆ ರಾಜ್ಯದಲ್ಲಿ ಉತ್ತಮ ಎನ್.ಎಸ್.ಎಸ್ ಘಟಕ ಪ್ರಶಸ್ತಿ ಹಾಗೂ ಪ್ರಶಸ್ತಿಗೆ ಕಾರಣಕರ್ತರಾದ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ನಿಚಿತಾ ಕುಮಾರಿ ಹಾಗೂ ಉತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ಪಡೆದ ಡಾ|| ಆಶೋಕ್ ಸಿ.ಪಿ. ಅವರಿಗೆ ಸಂಸ್ಥೆಯ ನಿರ್ದೇಶಕರಾದ ಡಾ|| ಬಿ.ಸಿ.ರವಿಕುಮಾರ್, ಪ್ರಾಂಶುಪಾಲರಾದ ಡಾ||.ನಾಗೇಶ್.ಕೆ.ಆರ್, ಮುಖ್ಯ ಆಡಳಿತಾಧಿಕಾರಿಗಳಾದ ಗಿರೀಶ್ ನಂದನ್. ವೈದ್ಯಕೀಯ ಅಧೀಕ್ಷಕರಾದ ಡಾ|| ಕೃಷ್ಣಮೂರ್ತಿ ,ನಿವಾಸಿ ವೈದ್ಯಾಧಿಕಾರಿಗಳು ಹಾಗೂ   ಸಂಸ್ಥೆಯ  ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಎನ್.ಎಸ್.ಎಸ್.ಕೋಶ, ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅ.12 ರಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಯುವನಿಕ ಸಭಾಂಗಣದಲ್ಲಿ  2018-19ನೇ ಸಾಲಿನ ಎನ್.ಎಸ್.ಎಸ್ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಆಶ್ವಥ್ ನಾರಾಯಣ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ,ರಾಷ್ಟ್ರೀಯ ಸೇವಾ ಯೋಜನೆಯ ಪ್ರಾಂತೀಯ ನಿರ್ದೇಶಕರಾದ ಖಾದ್ರಿ ನರಸಿಂಹಯ್ಯ , ರಾಜ್ಯ ಎನ್.ಎಸ್.ಎಸ್. ಕೋಶದ ಅಧಿಕಾರಿಗಳಾದ ಪ್ರತಾಪ್ ಲಿಂಗಯ್ಯ, ನಿಮಾನ್ಸ್‍ನ ನಿರ್ಧೇಶಕರಾದ             ಡಾ|| ಪ್ರತಿಮಾ ಮೂರ್ತಿ ಹಾಗೂ ಮತ್ತಿತರರು  ಸಮಾರಂಭದಲ್ಲಿ  ಹಾಜರಾಗಿದ್ದರು.

LEAVE A REPLY

Please enter your comment!
Please enter your name here