ಹಾಸನ ಜಿಲ್ಲಾ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ವತಿಯಿಂದ ನೆಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರೇಮಗಳೂರು ಕಣ್ಣನ್

0

ಸಮಾಜ ಕಟ್ಟುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಪ್ರೀತಂಗೌಡ

ಹಾಸನ: ಬೇರೆ ಉದ್ಯಮದಲ್ಲಿ ಲಾಭವಿದ್ದರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಸಮಾಜ ಕಟ್ಟುವ ಕೆಲಸದಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಪ್ರೀತಮ್ ಜೆ. ಗೌಡ ಶ್ಲಾಘಿಸಿದರು.
ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಿಲ್ಲಾ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಂಯುಕ್ತಾಶ್ರಯದಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನ ಮತ್ತು ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,

ಭಾರತದಲ್ಲಿ ಸಾವಿರಾರು ವರ್ಷಗಳಿಂದ ಗುರುಕುಲ ಪದ್ಧತಿ ಮೂಲಕ ಶಿಕ್ಷಣ ನೀಡಲಾಗುತ್ತಿತ್ತು. ಇದರಿಂದ ಭಾರತದಲ್ಲಿ ಜ್ಞಾನದ ಖಜಾನೆ ಇದೆ. ಬ್ರಿಟಿಷ್ ಶಿಕ್ಷಣ ವ್ಯವಸ್ಥೆ ಇದ್ದರೂ ಕೂಡ ನಮ್ಮಲ್ಲಿ ಇರುವುದು ಭಾರತೀಯ ಶಿಕ್ಷಣ ವ್ಯವಸ್ಥೆಯಾಗಿದೆ. ನಾವು ಇವತ್ತು ಶಿಕ್ಷಣ ವ್ಯವಸ್ಥೆಯಿಂದ ಅನೇಕ ಸವಾಲುಗಳಿದ್ದರೂ ಸ್ಥಿತಿವಂತರಾಗಿದ್ದೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ಸರಕಾರ ಮತ್ತು

ಸರಕಾರೇತರ ಎಂದು ನಾವೇ ಭಾಗಿ ಮಾಡಿಕೊಂಡಿದ್ದೇವೆ. 130 ಕೋಟಿ ಜನಸಂಖ್ಯೆ ಇರುವ ಭಾರತ ದೇಶಕ್ಕೆ ಶಿಕ್ಷಣ ಕೊಡುವ ಪರಿಸ್ಥಿತಿಯಲ್ಲಿ ಬೇರೆ ಉದ್ದಿಮೆಯಲ್ಲಿ ಲಾಭ ಇದ್ದರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತುಕೊಟ್ಟು ಸಮಾಜವನ್ನು ಕಟ್ಟುವ ಕೆಲಸವನ್ನು ಖಾಸಗಿ ಶಿಕ್ಷಣ ಅನುದಾನ ರಹಿತ ಶಾಲೆಯ ಆಡಳಿತ ಮಂಡಳಿಯವರು ಕಳೆದ ಹಲವಾರು ದಶಕಗಳಿಂದ ಮುಂದುವರಿಸಿಕೊಂಡು ಬರುತ್ತಾ ಇಡೀ ದೇಶದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವ ರೀತಿ ಸಮಸ್ಯೆ ಆಗದ ರೀತಿ ಜವಾಬ್ದಾರಿಯುತವಾಗಿ ನಿರ್ವಹಿಸಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ 2022-23ನೇ ಸಾಲಿನ ಖಾಸಗಿ ಶಾಲೆಗಳ ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಜಿಲ್ಲೆಯ ಶಾಲಾ ಆಡಳಿತ ಮಂಡಳಿಗಳಿಗೆ ವಿದ್ಯಾಪ್ರೇರಣಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಂತರ

2021-22ನೇ ಸಾಲಿನ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮದ 10ನೇ ತರಗತಿಯ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಮತ್ತು ಶೇ 100 ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಲಾಯಿತು. ಖ್ಯಾತ ವಾಗ್ಮಿಗಳಾದ ಹಿರೆಮಗಳೂರು ಕಣ್ಣನ್‌ರವರಿಂದ ಉಪನ್ಯಾಸ ನಡೆಸಲಾಯಿತು.


ಇದೆ ವೇಳೆ ಶ್ರೀ ಆದಿಚುಂಚನಗಿರಿ ಮಠದ ಮಠಾಧೀಶ ಶ್ರೀ ಶಂಭುನಾಥಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಜಿಪಂ ಸಿಇಒ ಕಾಂತರಾಜು, ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್.ಕೆ.ಜವರೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೆ.ಎಸ್. ಪ್ರಕಾಶ್, ಜಿಲ್ಲಾ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಬಿ.ಈ.ಶಿವರಾಮೇಗೌಡ, ಉಪಾಧ್ಯಕ್ಷರಾದ ತಾರಾ ಎಸ್. ಸ್ವಾಮಿ, ಕಾರ್ಯದರ್ಶಿ ಬಿ.ಕೆ.ಗಂಗಾಧರ್, ವೆಂಕಟರಾಮು, ಕುಮಾರ್, ಮಮತಾನವೀನ್, ಅನಂತಕುಮಾರ್, ಭಾರತೀನಾಗೇಶ್ ಇತರರು ಉಪಸ್ಥಿತರಿದ್ದರು. ಲಕ್ಷಿ ನಾರಾಯಣ್ ನಿರೂಪಿಸಿದರು.

LEAVE A REPLY

Please enter your comment!
Please enter your name here