ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಮತ್ತು ಇಸ್ರೋ ಅಧ್ಯಕ್ಷ ಸೋಮನಾಥ್ ಅವರಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಬೆಂಗಳೂರು ವಿಶ್ವ ವಿದ್ಯಾಲಯ ನಿರ್ಧರಿಸಿದೆ. ಭಾರತದ ಮಾಜಿ ಪ್ರಧಾನಿ, ಜಿಲ್ಲೆಯ ಹೆಮ್ಮೆಯ ಪುತ್ರ ಹೆಚ್.ಡಿ.
ದೇವೇಗೌಡ ಅವರಿಗೆ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಅಧ್ಯಕ್ಷ ಸೋಮನಾಥ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.
ಬೆಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಆಯ್ಕೆ ಶಿಫಾರಸ್ಸಿಗೆ ವಿವಿ ಕುಲಧಿಪತಿಗಳಾದ ರಾಜ್ಯಪಾಲ ಥಾವ ಚಂದ್ ಗೆಹೋಟ್ ಒಪ್ಪಿಗೆ ನೀಡಿದ್ದು, ವಿಶ್ವವಿದ್ಯಾಲಯದ ಘಟ- ಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಇಬ್ಬರೂ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.
ಇದೇ ತಿಂಗಳ 29 ರಂದು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಂದ್ ಮಾಡುತ್ತಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ ಅವರು ಮಾಡಿದ ಅಪೂರ್ವ ಸಾಧನೆ ಮತ್ತು ರೈತನ ಮಗನಾಗಿ ಮಾಜಿ ಪ್ರಧಾನಿ ದೇವೇಗೌಡರು ಅತ್ಯುನ್ನತ ಸ್ಥಾನಕ್ಕೇರಿ ನಾಡಿಗೆ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.