ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ (ಆಂಗ್ಲ ಮಾಧ್ಯಮ) ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

0

ಅರಸೀಕೆರೆ : ದಿನಾಂಕ 03/10/2023 ರ ಮಂಗಳವಾರ ಅರಸೀಕೆರೆ ನಗರದಲ್ಲಿ ನಡೆಯುವ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಯ ಆಂಗ್ಲ ಮಾಧ್ಯಮ ನೂತನ ಕಟ್ಟಡ ಉದ್ಘಾಟನೆ ಸಮಾರಂಭದ ಪೂರ್ವಭಾವಿ ಸಭೆಯನ್ನು ಇಂದು ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆಎಂ ಶಿವಲಿಂಗೇಗೌಡರು ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸುಮಾರು ಎರಡು ಕೋಟಿಗಿಂತ ಹೆಚ್ಚಿನ ಅನುದಾನ ದಿಂದ ಕಟ್ಟಡವನ್ನು ನಿರ್ಮಿಸಲಾಗಿದೆ ಈ ಕಟ್ಟಡವನ್ನು ಉದ್ಘಾಟನೆ ಮಾಡಲು ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಹಾಗೂ ವಸತಿ ವಕ್ಫ್ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘ ಸಂಸ್ಥೆಗಳು, ಸಾರ್ವಜನಿಕರು ಆಗಮಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಎಂ ಸಮಿಉಲ್ಲಾ. ಸುನ್ನಿ ಮುಸ್ಲಿಂ ಜಮಾತ್ ಕಮಿಟಿಯ ಕಾರ್ಯದರ್ಶಿಗಳಾದ ರಿಯಾಜ್. ಯೂನಸ್. ಹಾಗೂ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here