ಅರಸೀಕೆರೆ ನಗರದಲ್ಲಿ ನಡೆದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ (ಆಂಗ್ಲ ಮಾಧ್ಯಮ) ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

0

ಇಂದು ಅರಸೀಕೆರೆ ನಗರದಲ್ಲಿ ನಡೆದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ (ಆಂಗ್ಲ ಮಾಧ್ಯಮ) ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ವಸತಿ ವಕ್ಚ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹಮದ್ ರವರ ನೇತೃತ್ವದಲ್ಲಿ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಪೂರ್ಣಿಮಾ ಬಿ ಆರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಜಿಲಾನಿ ಎಚ್ ಮೊಕಾಶಿ, ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ತಾಲೂಕು ಪಂಚಾಯತ್ EO ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್,ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕ ವರ್ಗ,ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು,ಮುಖಂಡರುಗಳು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here