ಹಾಸನ :- 75ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಇಂದು ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದ ಸಚಿವರು, ದೇಶದಲ್ಲಿ ಇಂದು ನಾವು ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಪೂರ್ವಜರ ತ್ಯಾಗ-ಬಲಿದಾನ ಪ್ರತಿಫಲವಾಗಿದ್ದು ಅಂದು ಅವರು ಹೋರಾಟ ಮಾಡಿ ನಮಗೆ ಸ್ವಾತಂತ್ರ್ಯ ದೊರಕಿಸಿಕೊಡದಿದ್ದರೆ ಇಂದು ನಾವು ಯಾವುದೇ ವ್ಯಕ್ತಿಗಳ ಕಪಿಮುಷ್ಠಿಯಲ್ಲಿ ಜೀವಿಸಬೇಕಾಗಿರುತ್ತಿತ್ತು, ಸ್ವಾತಂತ್ರ್ಯ ಹೋರಾಟಗಾರರನ್ನು ವರ್ಷದ ಪ್ರತಿದಿನವೂ ಅವರ ಸ್ಮರಣೆ ಮಾಡಬೇಕು ಎಂದರು. ಹಾಗೂ ಇದೇ ಸಂದರ್ಭದಲ್ಲಿ ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಾಸಕರಾದ ಪ್ರೀತಂ ಗೌಡ,ವಿಧಾನಪರಿಷತ್ ಸದಸ್ಯರಾದ ಎಂ ಗೋಪಾಲಸ್ವಾಮಿ,ನಗರಸಭೆ ಅಧ್ಯಕ್ಷರಾದ ಆರ್ ಮೋಹನ್,ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಬಿ ಎ ಪರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಕೆ ಸತೀಶ್. ಹಾಗೂ ಇತರರು ಹಾಜರಿದ್ದರು.