ಹಾಸನ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಾಣದಹಳ್ಳಿ ಗ್ರಾಮದ ರಾಕೇಶ್ B.R.( ಕೇವಲ 22 ವರ್ಷದ ಯುವ ಯೋಧ) ಕಳೆದ ಒಂದೂವರೆ ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರಿದ್ದನು. ಚಂಡಿಘಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯ ಪೀಡಿತನಾಗಿ ಚಿಕಿತ್ಸೆ ಫಲಕಾರಿಯಾಗದೆ , ಇತ್ತೀಚೆಗಷ್ಟೇ ಸೇನಾಧಿಕಾರಿಗಳು ಅವರ ಕುಟುಂಬಕ್ಕೆ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ತಾಯಿ ಶಿವಮ್ಮ ಮತ್ತು ಸಹೋದರರು ಅಲ್ಲಿಗೆ ತೆರಳಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಯೋಧನ ತಾಯಿ ಶಿವಮ್ಮ ಪಟ್ಟಣ ಪಂಚಾಯ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಅರಕಲಗೂಡಿನ ಕೋಟೆಬೀದಿಯಲ್ಲಿ ವಾಸವಾಗಿದ್ದರು. ಮೃತ ದೇಹವು ಇಂದು ರಾತ್ರಿ ಅಥವಾ ನಾಳೆ ಆಗಮಿಸುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ R.I.P