ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಮೃತರು. ಮಂಗಳೂರು ಕಡೆಗೆ ತೆರುಳುತ್ತಿದ್ದ ಇನ್ನೋವಾ ಕಾರು ಹಾಗೂ
ಹಾಸನ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ,
ಸಕಲೇಶಪುರ: ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರು ಹಾಗೂ
ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರು ಸಕಲೇಶಪುರದಿಂದ ಹಾಸನ ಕಡೆಗೆ ಬರುತ್ತಿತ್ತು ,
ರಾಷ್ಟ್ರೀಯ ಹೆದ್ದಾರಿ ಯ ಅವೈಜ್ಞಾನಿಕ ಕಾಮಗಾರಿಯಿಂದ ಈ ರಸ್ತೆಯು ಸಾವಿನ ಹೆದ್ದಾರಿ ಆಗಿದೆ.ರಸ್ತೆಯ ಎರಡು ಬದಿ
ಮಣ್ಣು ಹಾಕದೆ ಒಂದೆ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವಯದರಿಂದ ಪ್ರತಿ ನಿತ್ಯ ರಸ್ತೆ ಅಪಘಾತ ಆಗುತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ