ಹಾಸನ/ಚಿಕ್ಕಮಗಳೂರು; ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ನಗರದ ಹೂವಿನ ಮಾರ್ಕೆಟ್ ರಸ್ತೆಯ ಗಾಯತ್ರಿ ಶಾಂತೇಗೌಡ ಅವರ ನಿವಾಸ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದಾರೆ. , ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ಗಾಯತ್ರಿ ಅವರ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡ್ತಿದ್ದಾರೆ. ಅಧಿಕಾರಿಗಳು ಬಂದಿದ್ದ ಕಾರಿನ ಗಾಜಿನ ಮೇಲೆ ಮದುವೆ ಬೋರ್ಡ್ ಇದೆ.
ಯಾರಿಗೂ ಅನುಮಾನ ಬಾರದಿರಲೆಂದು ಈ ರೀತಿ ಬೋರ್ಡ್ ಹಾಕಿ ಬಂದಿದ್ದಾರೆ. ಅಭಿನವ್ ವೆಡ್ಸ್ ದೀಪಿಕಾ ಎಂದು ಕಾರಿನ ಮೇಲೆ ಪೋಸ್ಟರ್ ಅಂಟಿಸಲಾಗಿದೆ. ಕಾಂಗ್ರೆಸ್ ನಾಯಕಿ ಗಾಯತ್ರಿ ಅವರ ಪತಿ ಶಾಂತೇಗೌಡ ಗುತ್ತಿಗೆದಾರರಾಗಿದ್ದು, ಕಳಸಾಪುರ ರಸ್ತೆಯ ಅವರ ಕ್ರಷರ್ ಮೇಲೆಯೂ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತ
ಹಾಸನ ಜಿಲ್ಲೆ ಬೇಲೂರಿನಲ್ಲಿರುವ ಅಳಿಯ ಸಂತೋಷ್ ಅವರ ಮನೆ ಮೇಲೂ ದಾಳಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಇಂದು ಮುಂಜಾನೆ ಆದಾಯ ತೆರಿಗೆ (IT) ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿಸಿದೆ.
ಈ ನಡುವೆ ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸ ಮೇಲೆ ದಾಳಿ, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ
ಮನೆಗಳ ಮೇಲೆ, ಚಿಕ್ಕಮಗಳೂರು ತಾಲೂಕಿನ ಮರ್ಲೆಯಲ್ಲಿರುವ ಕಲ್ಲಿನ ಕ್ರಷರ್ ಕಚೇರಿ ಹಾಗೂ ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಅಧಿಕಾರಿಗಳು ನಡೆಸಿದ್ದಾರೆ. ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. , ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಂತೇಗೌಡ ಅವರ ನಿವಾಸಕ್ಕೆ ಇಂದು ಮುಂಜಾನೆ ಐಟಿ ಅಧಿಕಾರಿಗಳು ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ತಮ್ಮ ಕಾರಿನ ಮುಂಭಾಗದಲ್ಲಿ ‘ಅಭಿನವ್ ವೆಡ್ಸ್ ದೀಪಿಕಾ’ ಎಂದು ಮದುವೆಯ ದಿಬ್ಬಣದ ಪೋಸ್ಟ್ ಹಾಕಿಕೊಂಡು ಬಂದಿದ್ದಾರೆ. , ವಿಧಾನ ಪರಿಷತ್ ಮಾಜಿ ಸದಸ್ಯೆಯಾಗಿರುವ ಗಾಯತ್ರಿ ಶಾಂತೇಗೌಡ ಮುಂಬರುವ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ಕ್ಷೇತ್ರದ
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಕುಮ್ಮಕ್ಕಿನಿಂದ ಈ ಐಟಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. , ಐಟಿ ದಾಳಿ ಖಂಡಿಸಿ ಪ್ರತಿಭಟನೆ , ಈ ನಡುವೆ ಐಟಿ ದಾಳಿ ಖಂಡಿಸಿ ಗಾಯತ್ರಿ ಶಾಂತೇಗೌಡರ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. , ಬಿಜೆಪಿ ಸರಕಾರ ಆದಾಯ ತೆರಿಗೆ ವಿಭಾಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಬಿಜೆಪಿ ಸರಕಾರಕ್ಕೆ ಧಿಕ್ಕಾರ, ಶಾಸಕ ಸಿ.ಟಿ.ರವಿ ವಿರುದ್ಧ ‘ಲೂಟಿ ರವಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು. , ಪ್ರತಿಭಟನೆಯ ಹಿನ್ನೆಲೆಯಲ್ಲಿ
ಗಾಯತ್ರಿ ಶಾಂತೇಗೌಡರ ಮನೆ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ