ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

0

ಹಾಸನ ಆ.19 : ಜವಾಹರ ನವೋದಯ ವಿದ್ಯಾಲಯ 6 ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, www.navodaya.gov.in ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಹಾಸನ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 5 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನೊಂದಾಯಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ 25.08.2023 ರವೆಗೆ ವಿಸ್ತರಿಸಲಾಗಿದ್ದು, ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ತಿದ್ದುಪಡಿ ಮಾಡಬೇಕಾದರೆ ಅಂತಹವರು ದಿ 26 ಮತ್ತು 27 ರಂದು ಮಾಡಬಹುದು. ಇದರ ಉಪಯೋಗವನ್ನು ವಿದ್ಯಾರ್ಥಿಗಳು/ಪೋಷಕರು. ಸದುಪಯೋಗ ಪಡಿಸಿಕೊಳ್ಳವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here