ಜಾವಗಲ್ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಪಾದಾಚಾರಿ ಮಾರ್ಗದಲ್ಲಿ ಸುಮಾರು ಒಂದು ತಿಂಗಳಿನಿಂದ ರಾಗಿ ಕಟಾವು ಮಾಡುವ ಯಂತ್ರ ನಿಂತಿದ್ದು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಪಾದಾಚಾರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಯಾವುದೇ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿಲ್ಲ