” ಹಾಸನ ಜಿಲ್ಲೆಗೆ ಮತ್ತೆ ಉಸ್ತುವಾರಿ ಸಚಿವನಾಗಿ ನೇಮಕ ಮಾಡಿರುವುದಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ Basavaraj Bommai ಅವರಿಗೆ ಧನ್ಯವಾದಗಳು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ನನ್ನ ಧ್ಯೇಯ. ಉಸ್ತುವಾರಿ ಸಚಿವನಾಗಿ ಇದು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ , ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳು ಹಾಜರು ” – ಕೆ.ಗೋಪಾಲಯ್ಯ (ಹಾಸನ ಜಿಲ್ಲಾ ಉಸ್ತುವಾರಿ ಸಚಿವರು)
ಹಾಸನ ಜಿಲ್ಲೆಗೆ ಭೇಟಿ ನೀಡಿ ಕೊರೋನಾ ನಿಯಂತ್ರಣ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.
ಡಿ ಸಿ ಗಿರೀಶ್, ಶಾಸಕರುಗಳಾದ ಶ್ರೀ ಹೆಚ್ ಕೆ ಕುಮಾರಸ್ವಾಮಿ, ಶ್ರೀ ಶಿವಲಿಂಗೇಗೌಡ MLC ಶ್ರೀ ಗೋಪಾಲಸ್ವಾಮಿ ಮತ್ತಿತರರು ಉಪಸ್ಥಿತಿ
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಭಾರೀ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ನೂರಾರು ಕುಟುಂಬಗಳ ಮನೆ ಹಾನಿಯಾಗಿದ್ದು ಸಂತ್ರಸ್ತರಿಗೆ ಪರಿಹಾರ ಹಣದ ಚೆಕ್ ವಿತರಣೆ.
ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಹಾಜರು
ಸಕಲೇಶಪುರ ತಾಲ್ಲೂಕಿನ ದೊಳಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ NH-75 ರಲ್ಲಿ ಉಂಟಾಗಿರುವ ಭೂ ಕುಸಿತ ಹಾಗೂ
ದುರಸ್ತಿ ಕಾಮಗಾರಿ ಪರಿಶೀಲನೆ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ಶಾಸಕರಾದ ಶ್ರೀ HK ಕುಮಾರಸ್ವಾಮಿ ಹಾಗೂ ಅಧಿಕಾರಿಗಳು ಹಾಜರು
ಈ ಸಂದರ್ಭದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯ ಮಕ್ಕಳ ವಾರ್ಡ್ ಸಿದ್ಧಪಡಿಸಲಾಗಿದೆ. ಎಲ್ಲಾ ತಾಲ್ಲೂಕುಗಳಲ್ಲೂ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗುವುದು.
ಆಮ್ಲಜನಕ ಕೊರತೆ ಉಂಟಾಗದಂತೆ ಹೆಚ್ಚುವರಿಯಾಗಿ 400 ಆಮ್ಲಜನಕ ಸಿಲಿಂಡರ್‌ಗಳನ್ನು ಖರೀದಿಸಲಾಗಿದೆ ಎಂದರು