ನವೆಂಬರ್ 1 ರಂದು ಬೆಳಿಗ್ಗೆ 8.45ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

0

ಹಾಸನ,ಅ.29(ಹಾಸನ್_ನ್ಯೂಸ್):- ಕನ್ನಡ ರಾಜ್ಯೋತ್ಸವ ದಿನಾಚರಣಾ ಸಮಿತಿ ವತಿಯಿಂದ ನವೆಂಬರ್ 1 ರಂದು ಬೆಳಿಗ್ಗೆ 8.45ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯ ಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತರಿರಲಿದ್ದಾರೆ.
ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಶಾಸಕರಾದ ಪ್ರೀತಮ್ ಜೆ.ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್. ಶ್ವೇತಾ ದೇವರಾಜ್, ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಹೆಚ್.ಕೆ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಕೆ.ಎಸ್. ಲಿಂಗೇಶ್, ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಂ.ಎ. ಗೋಪಾಲಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಜ್ಯೋತಿ ಅಪ್ಪಣ್ಣ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆಕರ್ಷಕ ಪಥ ಸಂಚಲನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್.1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕ ಪಥ ಸಂಚಲನ ಮೂಡಿ ಬರಲು ಅ.28, 29 ಹಾಗೂ 30 ರಂದು ಪೂರ್ವಾಭ್ಯಾಸ ಮಾಡುವಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್. ನಂದಿನಿ ಅವರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭಾಂಗಣದಲ್ಲಿಂದು ನಡೆದ ಪೆರೆಡ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆ 3 ತುಕಡಿ, ಕೆ.ಎಸ್.ಆರ್.ಪಿ. 1 ತುಕಡಿ, ಗೃಹರಕ್ಷಕ ದಳ 1 ತುಕಡಿ, ಅರಣ್ಯ ಇಲಾಖೆ 1 ತುಕಡಿ ಭಾಗವಹಿಸುವಂತೆ ಅವರು ಸೂಚಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣಕ್ಕಾಗಿ ಧ್ವಜಸ್ಥಂಭ ಹಾಗೂ ಧ್ವಜವನ್ನು ನಿಯಮಾನುಸಾರ ನಿರ್ವಹಿಸಲು ಮತ್ತು ಪೆರೇಡ್ ಮೈದಾನವನ್ನು ಬಾಗೇಶಪುರದ ಮಣ್ಣಿನಲ್ಲಿ ಸಿದ್ದಪಡಿಸಲು ಮತ್ತು ಅಲಂಕರಿಸಲು ಡಿ.ವೈ.ಎಸ್.ಪಿ. ಡಿ.ಎ.ಆರ್. ಅವರು ನಿರ್ವಹಿಸಬೇಕು ಎಂದು ತಿಳಿಸಿದರು.
ಪೆರೇಡ್ ಪೂವಭ್ಯಾಸಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಮತ್ತು ಬಿಸ್ಕತ್ತು ವ್ಯವಸ್ಥೆಯನ್ನು ಸಿ.ಪಿ.ಐ. ಹಾಸನ ನಗರ ವೃತ್ತ ಅವರು ಒದಗಿಸುವಂತೆ ಅವರು ಸೂಚಿಸಿದರು.


#kannadarajyotsava2020 #ಕನ್ನಡರಾಜ್ಯೋತ್ಸವ೨೦೨೦ @iprajwalrevanna @preethamjgowdaofficial @hd_devegowda_academy #gopalayya #hassandistrictadministration #hassan

LEAVE A REPLY

Please enter your comment!
Please enter your name here