ನಮ್ಮ ಹಾಸನದ ಜಾನಪದ ವಿದ್ವಾಂಸರು ,ಸಾಹಿತಿಗಳು, ಸಂಶೋಧಕರು, ಶಿಕ್ಷಣ ತಜ್ಞರು ಆದ ಡಾ.ಹಂಪನಹಳ್ಳಿ ತಿಮ್ಮೇಗೌಡ ಅವರಿಗೆ ೨೦೨೦ ನೆ ಸಾಲಿನ ‌ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಕರ್ನಾಟಕ ಸರ್ಕಾರ ಗೌರವಿಸಿದೆ.

0

ಇವರು ನಲವತ್ತು ವರ್ಷಗಳಿಂದ ಜಾನಪದ ,ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ.ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ,ಸಂಪಾದಿಸಿ ಪ್ರಕಟಿಸಿದ್ದಾರೆ.ಸುಮಾರು ೨೦೦ ಕ್ಕಿಂತ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ.ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದರು.ಹತ್ತು ವರ್ಷಗಳಿಂದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಕೆಲಸ ನಿರ್ವಹಿಸುತಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳಲ್ಲಿ, ಸಾಹಿತ್ಯಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ವಿಚಾರ ಸಂಕಿರಣ ,ಕಮ್ಮಟ, ಕಾರ್ಯಕ್ರಮ, ಕಲಾ ಮೇಳಗಳನ್ನು ಸಂಘಟಿಸಿ ಸಂಚಾಲಕರಾಗಿ ಕೆಲಸ ಮಾಡಿದ್ದಾರೆ.

            ಹಾಸನ ಜಿಲ್ಲೆಯ ಜಾನಪದದ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿದವರಾಗಿದ್ದು ಜಿಲ್ಲೆಯ ಸಾಹಿತ್ಯ, ಸಾಂಸ್ಕೃತಿಕ ಸಂದರ್ಭಗಳಲ್ಲಿ ಇವರ ಸೇವೆ ಅನನ್ಯ. ೫೦೦ ರಕ್ಕಿಂತ ಹೆಚ್ಚು ಸಭೆ, ಸಮಾರಂಭಗಳಲ್ಲಿ ವಿಶೇಷ ಉಪನ್ಯಾಸ ನೀಡಿದ್ದಾರೆ. ಜಿಲ್ಲೆಯ ಹಲವಾರು ಕಲಾವಿದರನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಪರಿಚಯಿಸಿ ಪ್ರಶಸ್ತಿಗಳನ್ನು ಕೊಡಿಸಿದ್ದಾರೆ. ಅವರಿಗೆ ಆರ್ಥಿಕ ನೆರವು ನೀಡಿದ್ದಾರೆ. ನೂರಾರು ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅತಿಶಯವಾಗಿದೆ. ಹಲವಾರು ವಿದ್ಯಾರ್ಥಿಗಳಿಗೆ  ಸಂಶೋಧನಾ ಮಾರ್ಗದರ್ಶನ ಮಾಡಿದ್ದಾರೆ.

#ಕನ್ನಡರಾಜ್ಯೋತ್ಸವ೨೦೨೦

LEAVE A REPLY

Please enter your comment!
Please enter your name here