ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ Siddaramaiah ಅವರನ್ನು ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಹರಿರಾಮ್ ಶಂಕರ್ ಅವರು ಸ್ವಾಗತಿಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಈ ವೇಳೆ ಹಾಜರಿದ್ದರು.
ಮುಖ್ಯಮಂತ್ರಿ Siddaramaiah ಅವರು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಿನ ಜನತೆಗೆ ಶುಭ ಕೋರಿದರು.
ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಹೆಚ್.ಕೆ.ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳ ಮತ್ತಿತರರು ಹಾಜರಿದ್ದರು.
ಹಾಸನ ನಾಡ ಪ್ರಭ ಕೆಂಪೇಗೌಡರ 514ನೆಯ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮಕ್ಕೆ ಮಂಗಳವಾರ ನಗರದ ಹಾಸನಂಬ ಕಲಾ ಕ್ಷೇತ್ರದ ಆವರಣದಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಮೆರವಣಿಗೆಗೆ ಜಿಲ್ಲೆ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ, ಶಿವರಾಜ್ ತ೦ಗಡಗಿ, ಶಾಸಕ ಶಿವಲಿಂಗೇಗೌಡ, ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಶಾಸಕ ಸ್ವರೂಪ ಪ್ರಕಾಶ್, ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ನಗಾರಿ ಹಾಗೂ ಡೊಳ್ಳು ಬಾರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ವಿಶೇಷವಾಗಿ ಅಲಂಕೃತ ರಥದಲ್ಲಿ ಇರಿಸಲಾದ ಕೆಂಪೇಗೌಡರು ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಭಾವಚಿತ್ರಕ್ಕೆ
ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.
ಮೆರವಣಿಗೆಯಲ್ಲಿ ಕಂಸಾಳೆ ,ಕೀಲುಕುದರೆ ಡೊಳ್ಳು ಕುಣಿತ ಸೇರಿದಂತೆ 15ಕ್ಕೂ ಹೆಚ್ಚು ಸಾಂಸ್ಕೃತಿ ತಿಕ ಕಲಾತಂಡಗಳು ಭಾಗವಹಿಸಿದ್ದವು.
ಮೆರವಣ ಗೆ ತ ಹಾಸನಾಂಬ ಕಲಾ ಕ್ಷೇತ್ರದಿಂದ ಸಾಗಿ ಆಸಿ ರಸ್ತೆ ಮೂಲಕ ವೇದಿಕೆ ಕಾರ್ಯಕ್ರಮದ ಸ್ಥಳಕ್ಕೆ ಬಂದು ಸೇರಿತು.
ಈ ಸಂದರ್ಭದಲ್ಲಿ
ವಿಧಾನ ಪರಿಷತ್ ಮಾಜಿ ಸದಸ್ಯ ಗೋಪಾಲಸ್ವಾಮಿ, ಎಚ್. ಕೆ ಜವರೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೆಶಕ ರಘು ಗೌಡ, ಜಿಲ್ಲಾಧಿ ಕಾರಿ ಅರ್ಚನಾ, ಜಿಲ್ಲಾ ವಕ್ಕಲಿಗರ ಸಂಘದ ಅಧ್ಯಕ್ಷ ಮುದ್ದೆ ಗೌಡ, ಎಚ್‌ಪಿ ಮೋಹನ್ ಜಿಲ್ಲಾ ಕಸಾಪ ಅಧ್ಯಕ್ಷ ಮಲ್ಲೇಶ ಗೌಡ, ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಗೌಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಹಾಸನ: ರಾಜ್ಯದಲ್ಲಿ 5 ಗ್ಯಾರಂಟಿ ಸಂಪೂರ್ಣ ಜಾರಿಗೆ ವಾರ್ಷಿಕ 59 ಸಾವಿರ ಕೋಟಿ ಹಣ ಬೇಕಾಗುತ್ತದೆ. ಈ ವರ್ಷ ಸರ್ಕಾರಕ್ಕೆ ಭಾರ ಹೆಚ್ಚಿದೆ ವಿರೋಧ ಪಕ್ಷ ಏನೇ ಹೇಳಿ ದರು 5 ಗ್ಯಾರಂಟಿ ಚಾರಿನಾಡಿಯೇ ಸಿದ್ದ ಎಂದು ಸಿಎಂ ಸಿದ್ದ ರಾಮಯ್ಯ ಸ್ಪಷ್ಟಪಡಿಸಿದರು
ನಗರದಲ್ಲಿ ಆಯೋಜಿಸಲಾಗಿದ್ದ
ಕೆಂಪೇಗೌಡ ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸೋ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವನಿಧಿ 22-23 ಸಾಲಿನಲ್ಲಿ ಉತ್ತೀರ್ಣರಾದ ಪದವಿ
ಹಾಗೂ ಡಿಪ್ಲೊಮಾ ಮಾಡಿದವರಿಗೆ ಆರು ತಿಂಗಳಲ್ಲಿ ಕೆಲಸ ಸಿಗದಿದ್ದರೆ
ಸಹಾಯಧನ 24 ತಿಂಗಳು ಸಿಗಲಿದೆ ಉದ್ಯೋಗ ಸಿಕ್ಕನಂತರ ಯೋಜನೆ ಸ್ಥಗಿತವಾಗಲಿದೆ.ಅಂತಾಂತವಾಗಿ
ಉದ್ಯೋಗ ಸೃಷ್ಟಿ ಮಾಡಲಿದ್ದೇವೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸರಿಯಾದ ರೀತಿಯಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ. ಎಂಬುದು ಸುಳ್ಳು ಅವರನ್ನು ಸಾಂಪ್ರದಾಯಿಕ ವಾಗಿಯೆ ಆಹ್ವಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಎಲ್ಲಾ ಗ್ಯಾರಂಟಿ ಈಡೇರಿಸಲು 59 ಸಾವಿರ ಕೋಟಿ ಬೇಕು ಐದು ಗ್ಯಾರಂಟಿ ಜಾರಿ ನಿಶ್ಚಿತ: ಸಿದ್ದರಾಮಯ್ಯ
ಬಿಜೆಪಿಯವರಿಗೆ ಬದ್ಧತೆಯಿದ್ದರೆ ಕೇಂದ್ರದಿಂದ ಅಕ್ಕಿ ಕೊಡಿಸಲಿ- ಸಿಎಂ ಸಿದ್ಧರಾಮಯ್ಯ ಟಾಂಗ್.
ಹಾಸನ: ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧಲರಾಮಯ್ಯ, ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ . ರಾಜಕೀಯ ಗಿಮಿಕ್ ಮಾಡಲು ಹೊರಾಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದು ಟಾಂಗ್ ನೀಡಿದರು.
ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ಡಿ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ
ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದರು.
ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ.
ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ. ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ
ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ ಎಂದು ಪ್ರಶ್ನಿಸಿದರು.
ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು.
ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ :
2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ. ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.
ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ
ಕೆಂಪೇಗೌಡರು ಜನಪರ ಹಾಗೂ
ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ
ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದು ಸಿಎಂ ಸಿದ್ಧಿರಾಮಯ್ಯ ತಿಳಿಸಿದರು.