ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ

0

ಕೋವಿಡ್-19 ವೈರಾಣು ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ.

ಓದಲಾಗಿದೆ: 1. ಮಾನ್ಯ ಮುಖ್ಯ ಮಂತ್ರಿಯವರ ಘೋಷಣೆ:

  • ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯು ಕೋವಿಡ್-19 ನಿಂದಾದ ಮರಣಗಳನ್ನು ದೃಢಪಡಿಸಲು ನೀಡಿರುವ ಮಾನದಂಡಗಳು.

ಪ್ರಸ್ತಾವನೆ:

ಕೋವಿಡ್-19 ವೈರಾಣು ಸೋಂಕು ವಿಶ್ವದಾದ್ಯಂತ ಪಸರಿಸಿ, ಭಾರತ ದೇಶ ಹಾಗೂ ಕರ್ನಾಟಕ ರಾಜ್ಯದಲ್ಲೂ ಸಹ ಹರಡಿರುತ್ತದೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳಿಗೆ ತ್ವರಿತ ಮತ್ತು ಗುಣಮಟ್ಟದ ಆರೈಕೆ ಒದಗಿಸಲು ರಾಜ್ಯ ಸರ್ಕಾರವು ಆರೋಗ್ಯ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ನಿರಂತರ ಪ್ರಯತ್ನ ಮಾಡಿರುತ್ತದೆ. ಕೋವಿಡ್-19 ನಿಯಂತ್ರಣಕ್ಕಾಗಿ ವಿಧಿಸಲಾದ ಕಟ್ಟುನಿಟ್ಟಿನ ಮಾರ್ಗಸೂಚಿಗಳ ಜಾರಿಯಿಂದಾಗಿ ಉಂಟಾದ ಆರ್ಥಿಕ ಸಂಕಷ್ಟಗಳನ್ನು ನಿವಾರಿಸಲು ದುರ್ಬಲ ವರ್ಗದ ಗುಂಪುಗಳಿಗೆ ವಿವಿಧ ಆರ್ಥಿಕ ಪರಿಹಾರ ಪ್ಯಾಕೇಜು/ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೋವಿಡ್-19 ವೈರಾಣು ಸೋಂಕಿನ ಪರಿಣಾಮವಾಗಿ ರಾಜ್ಯಾದ್ಯಂತ ಈವರೆಗೆ ಸಾವಿರಾರು ಕುಟುಂಬಗಳಲ್ಲಿ ಹಲವು ಸಾವು ನೋವುಗಳು ಸಂಭವಿಸಿರುತ್ತದೆ.

ರಾಜ್ಯಸರ್ಕಾರವು ನಿರಂತರವಾಗಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಅನುಸರಿಸಿದ್ದರೂ ಸಹ 2020ರ ಮಾರ್ಚ್ ಮಾಹೆಯಿಂದ ಈವರೆಗೆ ರಾಜ್ಯದಲ್ಲಿ ಉಂಟಾದ ಕೋವಿಡ್-19ನ ಮೊದಲನೇ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಹಲವಾರು ವ್ಯಕ್ತಿಗಳು ಕೊರೋನ ವೈರಾಣು ಸೋಂಕಿಗೆ ತುತ್ತಾಗಿ ಮೃತಪಟ್ಟಿರುತ್ತಾರೆ. ಈ ಸಾಂಕ್ರಾಮಿಕದಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಹಲವು ಕುಟುಂಬಗಳು ದುಡಿಯುವ ಸದಸ್ಯರನ್ನು ಕಳೆದುಕೊಂಡಿವೆ ಎಂಬ ಅಂಶವನ್ನು ಅರಿತುಕೊಂಡು ಮಾನ್ಯ ಮುಖ್ಯ ಮಂತ್ರಿಯವರು ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಪ್ರತಿಯೊಂದು ಕುಟುಂಬಕ್ಕೆ ರೂ.1.00 ಲಕ್ಷಗಳ ಆರ್ಥಿಕ ನೆರವನ್ನು ನೀಡುವುದಾಗಿ ಘೋಷಿಸಿರುತ್ತಾರೆ.

ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯು ಕೋವಿಡ್-19 ನಿಂದಾದ ಮರಣಗಳನ್ನು ದೃಢಪಡಿಸಲು ಈ ಕೆಳಕಂಡ ಮಾನದಂಡಗಳನ್ನು ನಿಗದಿಪಡಿಸಿರುತ್ತದೆ. Criteria to declare death and certify death due to COVID-19

a. Declaration: The death of a person who was diagnosed COVID-19 by RT PCR/RAT/Trunat/CB-NAAT or any other diagnostic test that is approved by the ICMR and treated in home isolation/COVID Care Centre (CCC)/hospital (Govt. or Private); or diagnosed and treated as COVID-19 like syndrome in a hospital (Govt. or private)

shall be considered to have died of COVID-19. HASSAN

b. Documents required:

i. COVID 19 positive report from recognized laboratory, should have uploaded in S3 portal, shall have P number and Certified by a qualified Medical Practitioner.

ii. If treated symptomatically (any suspected case who is RT-PCR negative, but clinico radiological evidence & other laboratory values are suggestive of COVID 19 cases), shall have P Number & Certified by a qualified Medical Practitioner.

ಪುಸ್ತಾವನೆಯಲ್ಲಿನ ಅಂಶಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಗಿರುವ ಪ್ರತಿಯೊಂದು ಕುಟುಂಬಕ್ಕೆ ರೂ.1.00 ಲಕ್ಷಗಳ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿ, ಈ ಕೆಳಕಂಡಂತೆ ಆದೇಶಿಸಿರುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಕಂಇ 294 ಟಿಎನ್ಆರ್ 2021;

ಬೆಂಗಳೂರು, ದಿನಾಂಕ:08ನೇ ಜುಲೈ 2021

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕೋವಿಡ್-19 ವೈರಾಣು ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಕ್ಕೆ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು ಮಾತ್ರ ಆರ್ಥಿಕ ನೆರವನ್ನು ನೀಡಲು ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಕಂದಾಯ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಿದ

ಸದರಿ ಉದ್ದೇಶಕ್ಕೆ ಅಗತ್ಯವಾದ ಅನುದಾನವನ್ನು 2021-22ನೇ ಸಾಲಿನ ಆಯವ್ಯಯದ “ನೂತನ ಸಾಮಾಜಿಕ ಭದ್ರತೆ (ಸಂಧ್ಯಾ ಸುರಕ) ಲೆಕ್ಕ ಶೀರ್ಷಿಕೆ:2235-60-001-0-02-116 (ಸಾಮಾಜಿಕ ಭದ್ರತ ಪಿಂಚಣಿ) ರಡಿ ಭರಿಸತಕ್ಕದ್ದು.

ಷರತ್ತುಗಳು:

  1. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1.00 ಲಕ್ಷಗಳ ಪರಿಹಾರ ಪಾವತಿಸತಕ್ಕದ್ದು.

2, ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯು ಕೋವಿಡ್-19 ನಿಂದಾದ ಮರಣಗಳನ್ನು ದೃಢಪಡಿಸಲು ನೀಡಿರುವ ಮಾನದಂಡಗಳ ಆಧಾರದ ಮೇಲೆ ದೃಢಪಡಿಸಿರುವಂತಹ ಸಾವಿನ ಪುಕರಣಗಳಿಗೆ ಮಾತ್ರ ಪರಿಹಾರ ಮೊತ್ತವನ್ನು ಪಾವತಿಸತಕ್ಕದ್ದು.

  1. ಜಿಲ್ಲಾಧಿಕಾರಿಗಳು ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟಂತಹ ವ್ಯಕ್ತಿಗಳ ಸಂಪೂರ್ಣ ವಿವರಗಳನ್ನು ಜಿಲ್ಲಾ ಪಡೆಯತಕ್ಕದ್ದು. ವೈದ್ಯಾಧಿಕಾರಿಗಳಿಂದ
  2. ಜಿಲ್ಲಾ ವೈದ್ಯಾಧಿಕಾರಿಗಳು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ವಿವರ ನೀಡುವ ಮೊದಲು ಕೋವಿಡ್-19 ತಾಂತ್ರಿಕ ಸಲಹಾ ಸಮಿ ತಿಯು ನಿಗದಿಪಡಿಸಿದ ಮಾನದಂಡಗಳನ್ನು/ದಾಖಲೆಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
  3. ಜಿಲ್ಲಾ ವೈದ್ಯಾಧಿಕಾರಿಗಳು ನೀಡಿರುವ ಮೃತ ವ್ಯಕ್ತಿಗಳ ಮಾಹಿತಿಯ ಆಧಾರದ ಮೇಲೆ ಮೃತರ ಕಾನೂನು ಬದ್ಧ ವಾರಸುದಾರರನ್ನು/ಕುಟುಂಬದ ಸದಸ್ಯರನ್ನು ನಿಯಮಾನುಸಾರ ಗುರುತಿಸಿ, ದೃಢಪಡಿಸಿಕೊಂಡನಂತರವಷ್ಟೇ ಮೃತರ ಕಾನೂನು ಸಮ್ಮತ ವಾರಸುದಾರರಿಂದ ಅಧಿಕೃತ ಗುರುತು ಪತ್ರ ಮತ್ತು ಬ್ಯಾಂಕ್ ವಿವರಗಳನ್ನು ಜಿಲ್ಲಾಧಿಕಾರಿಗಳು ಪಡೆದು, ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಕಂದಾಯ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸತಕ್ಕದ್ದು.
  4. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ರೂ.1.00 ಲಕ್ಷಗಳನ್ನು RTGS/NEFT ಮೂಲಕ ನೇರವಾಗಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡತಕ್ಕದ್ದು. .
  5. ಈ ಸಂಬಂಧ ಕಾಲಕಾಲಕ್ಕೆ ಸರ್ಕಾರದಿಂದ ಮತ್ತು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ಹೊರಡಿಸುವ ಆದೇಶ/ಸುತ್ತೋಲೆಯಲ್ಲಿನ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು.
  6. ಜಿಲ್ಲಾ ಹಂತದಲ್ಲಿ ಜಿಲ್ಲಾಧಿಕಾರಿಗಳು ಮತ್ತು ರಾಜ್ಯ ಮಟ್ಟದಲ್ಲಿ ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಬೆಂಗಳೂರು ಇವರು ಪ್ರತಿವಾರ ಯೋಜನೆಯ ಪ್ರಗತಿಯನ್ನು ಪರಿಶೀಲಿಸತಕ್ಕದ್ದು.
  7. ಪರಿಹಾರ ಪಾವತಿಯಲ್ಲಿ ವಿಳಂಬ ಧೋರಣೆ ಅನುಸರಿಸುವುದು ಮತ್ತು ಕಾನೂನು ಬದ್ಧವಾಗಿ ಅಧಿಕೃತವಲ್ಲದ ವಾರಸುದಾರರಿಗೆ ಪರಿಹಾರ ಮೊತ್ತ ವಿತರಿಸುವುದು ಮೊದಲಾದಂತಹ ಲೋಪಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
  8. ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ (Website/Portal/App) ಮೂಲಕವೇ ನಿರ್ವಹಿಸತಕ್ಕದ್ದು.
  1. ಈ ಉದ್ದೇಶಕ್ಕಾಗಿ, ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ದಲ್ಲಿ ಪ್ರಸ್ತುತ ಚಾಲನೆಯಲ್ಲಿರುವ ತಂತ್ರಾಂಶಗಳ (Applications) ನೆರವನ್ನು ಪಡೆಯತಕ್ಕದ್ದು.
  2. ಕೋವಿಡ್-19 ಸೋಂಕಿನಿಂದ ಮೃತಪಟ್ಟ, ಬಿಪಿಎಲ್ ಕುಟುಂಬದ ವ್ಯಕ್ತಿಗಳ ಅಧಿಕೃತ ವಾರಸುದಾರರಿಗೆ ಪರಿಹಾರ ಮೊತ್ತವನ್ನು ಪಾವತಿಸಿರುವ ವಿವರಗಳ ವರದಿಯನ್ನು ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಕಂದಾಯ ಇಲಾಖೆ, ಬೆಂಗಳೂರು ಇವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಲ್ಲಿಸತಕ್ಕದ್ದು.
  3. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯೋಜನಾ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಅಂತರ್ಜಾಲ ತಾಣದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಗಳಿಗೆ ಪರಿಹಾರ ಪಾವತಿಸಿರುವ ಮಾಹಿತಿಯನ್ನೊಳಗೊಂಡ ಫಲಕವನ್ನು (Dash-Board) ಪ್ರಕಟಿಸತಕ್ಕದ್ದು ಮತ್ತು ಪ್ರತಿದಿನ ಇಂದೀಕರಿಸತಕ್ಕದ್ದು.

LEAVE A REPLY

Please enter your comment!
Please enter your name here