ಏಳು ವರ್ಷಗಳ ಕಾನೂನು ಹೋರಾಟದ ಬಳಿಕ KSRTC ಬ್ರಾಂಡ್ ಕೇರಳ ರಾಜ್ಯದ ಪಾಲಾಗಿದೆ. ಕರ್ನಾಟಕ ಕೆಎಸ್ಆರ್ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ.ಬುಧವಾರ ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈ ಕುರಿತು ತೀರ್ಪು ನೀಡಿದೆ. ತೀರ್ಪಿನ Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ.
ಕೇರಳ ಮತ್ತು ಕರ್ನಾಟಕ 2013ರಲ್ಲಿ KSRTC ವಿಸ್ತ್ರತ ರೂಪಕ್ಕಾಗಿ ಕಾನೂನು ಹೋರಾಟವನ್ನು ತೀವ್ರಗೊಳಿಸಿದವು. ಕೇರಳ ರಾಜ್ಯವು Kerala State Road Transport Corporation (KSRTC) ಹೆಸರಿನಲ್ಲಿ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆಯನ್ನು ಹೊಂದಿದೆ.ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈಗ ತೀರ್ಪು ಪ್ರಕಟವಾಗಿದ್ದು ಕೆಎಸ್ಆರ್ಟಿಸಿ ಕೇರಳದ ಪಾಲಾಗಿದೆ.
ಕೆಎಸ್ಆರ್ಟಿಸಿ ಎಂಬ ಹೆಸರನ್ನು ಕೇರಳ 1962ರಲ್ಲೇ ನೋಂದಣಿ ಮಾಡಿಸಿದೆ. ಕರ್ನಾಟಕ 1972ರಲ್ಲಿ ನೋಂದಣಿ ಮಾಡಿಸಿದ್ದು ಎಂಬ ಅಂಶವನ್ನು ತೀರ್ಪು ನೀಡುವಾಗ ಪರಿಗಣಿಸಲಾಗಿದೆ.