ನಾಳೆಯಿಂದ ಬಸ್ ಸಂಚಾರ ಆರಂಭ

0

ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಕೇಂದ್ರದಿಂದ ಬೆಂಗಳೂರು, ಮೈಸೂರು, ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಬಸ್ ಸಂಚಾರವನ್ನು ಜೂನ್ 21 ರಂದು ಬೆಳಗ್ಗೆ ಆರು ಗಂಟೆಯಿಂದ ಆರಂಭಿಸಲಾಗುತ್ತದೆ.
ಹಾಸನ ಬಸ್ ನಿಲ್ದಾಣದ ವ್ಯವಸ್ಥಾಪಕ ಮಂಜುನಾಥ್ ಮಾತನಾಡಿ, ಜೂನ್ 21 ರಿಂದ ಬಸ್ ಸಂಚಾರ ಆರಂಭ ಆಡಲಾಗುವುದು. ಪ್ರಯಾಣಿಕರು ಕೋವಿಡ್ ನಿಯಮದಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರಯಾಣ ಮಾಡಬೇಕಿದೆ. ಎಲ್ಲ ಬಸ್ಸುಗಳನ್ನು ಬಿಡುವುದಿಲ್ಲ, ಪ್ರಯಾಣಿಕರ ಸಂಖ್ಯೆಗೆ ತಕ್ಕಂತೆ ಬಸ್ ಬಿಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here