ಹಾಸನ : ಪ್ರಸ್ತುತ ಕೊನೆಯ ಅಂತಿಮ ಸೆಮಿಸ್ಟರ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇನ್ನೂ ಮುಗಿಯದಿರುವುದನ್ನು ಗಮನಿಸಿ ಹಾಗೂ ಸದರಿ ವಿದ್ಯಾರ್ಥಿಗಳ ಬೇಡಿಕೆಯನ್ನು, ವೇಳಾಪಟ್ಟಿಯನ್ನು ಪರಿಗಣಿಸಿ, ಆಗಸ್ಟ್ 2022 ರವರೆಗೆ ನವೀಕರಿಸಲಾಗಿದ್ದ ಅಂತಿಮ ವರ್ಷದ ಕೊನೆಯ ಸೆಮಿಸ್ಟರ್ನಲ್ಲಿ ಅಭ್ಯಸಿಸುತ್ತಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮೊ ಇತರೆ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳ ಪಾಸುಗಳನ್ನು ಮಾತ್ರ ಅಂತಿಮ ಪರೀಕ್ಷೆ ಮುಗಿಯುವವರೆಗೆ ಅಂದರೆ
ಅಕ್ಟೋಬರ್ -2022ರ ಅಂತ್ಯದವರೆಗೆ ಹಳೆಯ ಪಾಸ್ನ್ನು ಹಾಗೂ ಅವಧಿ ವಿಸ್ತರಣೆ ಸಮಯದಲ್ಲಿ ನೀಡಿರುವ ರಶೀದಿ ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ ಎಂದು ಚಿಕ್ಕ ಮಗಳೂರಿನ ವಿಭಾಗೀಯ ನಿಯಂತ್ರಾಣಾಧಿಕಾರಿ ತಿಳಿಸಿದ್ದಾರೆ.