ಕೆಎಸ್ಆರ್‌ಟಿಸಿ ಸಕಲೇಶಪುರ ಘಟಕದ ವ್ಯವಸ್ಥಾಪಕ ಕೊರೋನಾಗೆ ಬಲಿ

0

ಕೆಎಸ್ಆರ್‌ಟಿಸಿ ಸಕಲೇಶಪುರ ಘಟಕದ ವ್ಯವಸ್ಥಾಪಕ ಎಡ್ವಿನ್ನ್ ಜಯಚಂದ್ರ (57) ಕೊರೊನಾದಿಂದ ಮೃತಪಟ್ಟಿದ್ದಾರೆ. ಮೃತರು ಕಳೆದ ಆರು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಸಹಾಯಕ ವ್ಯವಸ್ಥಾಪಕರಾಗಿ ನಂತರ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆ ಇವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here