ಕೆ.ಎಸ್.ಆರ್.ಟಿ.ಸಿ ಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ

0

ಕೆ.ಎಸ್.ಆರ್.ಟಿ.ಸಿ. ನಿಗಮದಿಂದ ಒದಗಿಸಲಾಗುತ್ತಿರುವ 6 ಸಕಾಲ ಸೇವೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಲ್ಲಿ ಅರ್ಜಿ ಸಲ್ಲಿಸಲು ನಿಗಮದ ಕೇಂದ್ರ ಕಚೇರಿಯಿಂದ ನಿರ್ದೇಶನ ನೀಡಿದ್ದು, ಪ್ರಸಕ್ತ ವರ್ಷದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾದಲ್ಲಿ ವಿದ್ಯಾರ್ಥಿಗಳು ಬಸ್‍ಪಾಸ್ ಪಡೆಯಲು ಸೇವಾ ಸಿಂಧು ಪೋರ್ಟಲ್‍ನ ಮುಖಾಂತರ ಅರ್ಜಿಗಳನ್ನು ಸಲ್ಲಿಸಿ ಬಸ್ ಪಾಸ್ ಪಡೆಯಬೇಕಾಗಿರುತ್ತದೆ.

ಸಂಬಂಧಿತ ನಿಗಮದ 6 ಸೇವೆಗಳಿಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ರಿಯಾಯಿತಿ, ಉಚಿತ ಬಸ್ ಪಾಸ್, ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ಹಾಗೂ ಹೊಸ ಪಾಸ್‍ಗಾಗಿ ಅರ್ಜಿ ಸಲ್ಲಿಸಲು ಮತ್ತು ನವೀಕರಣಕ್ಕಾಗಿ, ಅಂಧರ ಉಚಿತ ಬಸ್ ಪಾಸ್ ಹಾಗೂ ಹೊಸ ಪಾಸ್‍ಗಾಗಿ ಅರ್ಜಿ ಸಲ್ಲಿಸಲು ಮತ್ತು ನವೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ ಪಾಸ್ ನವೀಕರಣಕ್ಕಾಗಿ, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ ಅಥವಾ ವಿಧವಾ ಪತ್ನಿಯರ ಉಚಿತ ಕೂಪನ್ ಪಡೆಯಲು, ಅಪಘಾತ ಪರಿಹಾರ ನಿಧಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈ ಸೇವೆಗಳಿಗಾಗಿ ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದ್ದು, ಸೇವಾ ಸಿಂಧು ಪೋರ್ಟಲ್‍ನಲ್ಲಿ ಈ ಸೇವೆಗಳನ್ನು ಪಡೆಯಲು ಫಲಾನುಭವಿಗಳು (ವಿದ್ಯಾರ್ಥಿಗಳನ್ನು ಒಳಗೊಂಡಂತೆ) ಅರ್ಜಿದಾರರು ಆಧಾರ್ ಕಾರ್ಡ್ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಅಗತ್ಯ ದಾಖಲೆಗಳನ್ನು ಆನ್‍ಲೈನ್ ಮುಖಾಂತರ ಅಪಲೋಡ್ ಮಾಡಬೇಕಾಗಿದ್ದು, ಭೌತಿಕವಾಗಿ ಪಾಸ್ ಪಡೆಯುವಾಗ ದಾಖಲೆಗಳ ಜೆರಾಕ್ಸ್ ಪ್ರತಿಯನ್ನು ನೀಡಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here