Breaking News

ಮೈಸೂರು– ಬೆಂಗಳೂರು ರೈಲು ‘ಟಿಪ್ಪು ಎಕ್ಸ್‌ಪ್ರೆಸ್‌’ ಹೆಸರನ್ನು ‘ಒಡೆಯರ್ ಎಕ್ಸ್‌ಪ್ರೆಸ್‌’ ಆಗಲಿದೆ

By

October 08, 2022

ಮೈಸೂರು/ಹಾಸನ/ಶಿವಮೊಗ್ಗ : ಮೈಸೂರು– ಬೆಂಗಳೂರು ನಡುವೆ ಸಂಚರಿಸುತ್ತಿರುವ ‘ಟಿಪ್ಪು ಎಕ್ಸ್‌ಪ್ರೆಸ್‌’ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್‌ಪ್ರೆಸ್‌’ ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿದ್ದು. 

ಅಂತೆಯೇ ಮೈಸೂರು – ಹಾಸನ – ತಾಳಗುಪ್ಪ ಓಡಾಡುವ ಎಕ್ಸ್‌ಪ್ರೆಸ್‌ ರೈಲಿಗೆ ‘ಕುವೆಂಪು ಎಕ್ಸ್‌ಪ್ರೆಸ್‌’ ಎಂದು ನಾಮಕರಣ ಮಾಡಿರುವುದಾಗಿ ಮಂಡಳಿಯ ಉಪನಿರ್ದೇಶಕ ರಾಜೇಶ್‌ ಕುಮಾರ್‌ ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ತಮ್ಮ ಅಧಿಕೃತ ಖಾತೆಯಲ್ಲೆ ಅಧಿಕೃತ ಆದೇಶ ಪ್ರತಿ ಸಹಿತ ಶೇರ್ ಮಾಡಿದ್ದಾರೆ.

ಈ ಕುರಿತ ಮಾಹಿತಿಯನ್ನು ಸಂಸದ ಪ್ರತಾಪಸಿಂಹ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.