ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಟಿವಿ ನೋಡುತ್ತಿರುವಾಗ ಹೃದಯಾಘಾತ ; ಉಪನ್ಯಾಸಕ ಸಾವು

0

ಹಾಸನ : ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನ ಹಳ್ಳಿ ಗ್ರಾಮದ ತ್ಯಾಗರಾಜ್ ಎಂ.ಟಿ(56) ಇವರು
ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಇವರು ಮಾನಸ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಹಳೆ ಕೋಟೆ ಹೋಬಳಿ, ಹರದನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಟಿವಿ ನೋಡುತ್ತಿರುವಾಗ ಹೃದಯಾಘಾತ ಸಂಭವಿಸಿದ್ದು, ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಒಬ್ಬ ಮಗಳು, ಮೂರು ಜನ ಅಣ್ಣಂದಿರು, ಒಬ್ಬರು ಅಕ್ಕ ಸೇ ರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಮಲ್ಲಪ್ಪನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here