ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ನಿಮ್ಮ ಪ್ರಕಾರ ಇದು ಹೇಗಿರಬೇಕಿತ್ತು? ಕಮೆಂಟ್ ಮಾಡಿ

0

ಕರ್ನಾಟಕದಲ್ಲಿ ಜೂನ್ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ

ಕರ್ನಾಟಕದಲ್ಲಿ ಜೂನ್ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಬ್ಲ್ಯಾಕ್ ಫಂಗಸ್ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಲಾಕ್ಡೌನ್ ವಿಸ್ತರಣೆಯಲ್ಲಿಯೂ ಈಗ ಜಾರಿಯಲ್ಲಿರುವ ಮಾರ್ಗಸೂಚಿಯೇ ಮುಂದುವರರೆಯಲಿದೆ ಎಂದು ಅವರು ತಿಳಿಸಿದರು.

ಜನರು ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಬೆಳಗ್ಗೆ 10 ಗಂಟೆಯ ನಂತರವೂ ಜನರು ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹೀಗಾದಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಜತೆಗೆ ಕರ್ನಾಟಕ ಲಾಕ್ಡೌನ್ ವಿಸ್ತರಣೆಯ ನಿರ್ಧಾರವನ್ನು ಹಿರಿಯ ಸಚಿವರ ಜಿತೆ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬೆಳಗ್ಗೆ 10 ಕಳೆದರೂ ಓಡಾಡುತ್ತಿರುವುದು ಕಂಡುಬರುತ್ತಿದೆ. ಬೆಳಗ್ಗೆ 9.45ರೊಳಗೆ ಜನರು ತಮ್ಮ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಸಹ ಅವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here