MA , Mcom ಓದಿ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡೋರ್ನ ನಾ ನೋಡಿದೀನಿ

0

ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಯ್ದ ಯುವಕ, ಯುವತಿ ಮಂಡಳಿಗಳ ಇವರು ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ-೨೦೨೩ರ ಕಾರ್ಯಕ್ರಮದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಕಾರ್ಯಕ್ರಮಕ್ಕೆ ಶಾಲೆ ಕಾಲೇಜು ವಿಧ್ಯಾರ್ಥಿಗಳನ್ನು ಕರೆದುಕೊಂಡು ಬಂದಿರುವುದು
ನೆಹರು ಯುವ ಕೇಂದ್ರದ ಬದ್ದತೆ ಇರುವುದಿಲ್ಲ. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ ಕೆಲಸ ಇಲ್ಲದೆ ಇರುವ ಯುವಕ ಯುವತಿಯರಿಗೆ ಮಂಡಳಿ ರಚನೆ ಮಾಡಿ ಅದರ ಸದಸ್ಯರಿಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸವಲತ್ತು ಉಪಯೋಗಿಸಿಕೊಂಡು ಆರ್ಥಿಕ ಸವಲತಾಗಬೇಕು. ನಿರುದ್ಯೋಗ ಸಮಸ್ಯೆ ಹೊಗಲಾಡಿಸಿಬೇಕು ಎಂದರು. ಕಾರ್ಯಕ್ರಮಕ್ಕೆ ಅನಗತ್ಯವಾಗಿ ಹಣ ಖರ್ಚು ಮಾಡಿ ಜೈಕಾರ ಹಾಕಿಸಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮಗಳಿಂದ ಯಾರಿಗೂ ಉಪಯೋಗವಾಗಲ್ಲ. ಸರ್ಕಾರದ ಹಣ ಖರ್ಚು ಮಾಡಿದ್ದಾರೆ ಗ್ರಾಮೀಣ ಭಾಗದ ಯುವಕ ಯುವತಿಯರನ್ನು ಕರೆಸಿಲ್ಲ ಎಂದು ವೇದಿಕೆಯಲ್ಲಿ ಅಸಮಧಾನವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here