ಮೇ 10 ವಿಧಾನಸಭಾ ಮತದಾನ ಹಿನ್ನೆಲೆ , ಇಂದು ಸಂಜೆಯಿಂದಲೇ ನಿಷೇಧಾಜ್ಞೆ ಜಾರಿ , 144ರನ್ವಯ ನಿಷೇದಾಜ್ಞೆ ಡಿಸಿ ಆದೇಶ

0

ಹಾಸನ: ವಿಧಾನಸಭೆ ಚುನಾವಣೆ ಮತದಾನವು ಮೇ 10 ರಂದು ನಡೆಯಲಿದ್ದು ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತಗಳನ್ನು ಯಾಚಿಸುವ ಸಂಧರ್ಭಗಳಲ್ಲಿ ಪರಸ್ಪರ ಘರ್ಷಣೆಗಳು ಉಂಟಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ಉಂಟಾಗುವ ಸಂಭವಗಳು ಹೆಚ್ಚಾಗಿರುತ್ತವೆ ಆದ್ದರಿಂದ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ದೃಷ್ಠಿಯಿಂದ ಮುಂಚಿನ ಮತದಾನ ಮುಕ್ತಾಯದ ಗಂಟೆಗಳ ಅವಧಿಯಲ್ಲಿ 48 ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ಮಾಡಲು ಅವಕಾಶವಿರುವುದಿಲ್ಲ ಸದರಿ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಬಹಿರಂಗ ಸಭೆ ಸಮಾರಂಭಗಳನ್ನು ನಿರ್ಬಂಧಿಸಿ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇದಾಜ್ಞೆಯನ್ನು ಹೊರಡಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಆದೇಶಿಸಿದ್ದಾರೆ.

ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾದ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೇ 8 ರ 6 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ನಿಷೇದಿತ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ ಜಾತಾ ಮೆರವಣಿಗೆ ಇತ್ಯಾದಿಗಳನ್ನು ನಡೆಸುವುದು, 5 ಜನರಿಗಿಂತ ಹೆಚ್ಚು ಜನ ಒಟ್ಟಿಗೆ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ.

ಮತದಾನ 48 ಮುಕ್ತಾಯದ ಮುಂಚಿನ ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ, ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ಪ್ರಚಾರಕ್ಕಾಗಿ ಮನೆಮನೆಗೆ ಮತಗಳನ್ನು ಯಾಚಿಸಲು ಕೇವಲ 5 ಜನರು ಮಾತ್ರ ಹೋಗತಕ್ಕದ್ದು ಎಂದು ಅವರು ತಿಳಿಸಿದ್ದಾರೆ

ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ, ಯಾವುದೇ ಪ್ರಚಾರಗಳನ್ನು ಬಿತ್ತಿ ಪತ್ರಗಳನ್ನು ಹಂಚುವ ಮೂಲಕ ವಾಹನದಲ್ಲಿ ಪ್ರಚಾರಮಾಡುವಂತಹ ಘೋಷಣೆ ಕೂಗುವಂತಹ, ಭಾಷಣ ಮಾಡುವಂತಹ ಚಟುವಟಿಕೆಗಳನ್ನು ನಿಷೇಧಿಸಿದ್ದಾರೆ.

ಸದರಿ ನಿಷೇಧಿತ ಅವಧಿಯಲ್ಲಿ ಆಯಾ ವಿಧಾನ ಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ಹೊರಗೆ ಹೋಗತಕ್ಕದ್ದು, ಈ ನಿಬಂಧನೆ ಬೇರೆ ಕ್ಷೇತ್ರದ ಮತದಾರರಿಗೆ ಅನ್ವಯಿಸುವುದಿಲ್ಲ.

ಮದುವೆ, ಮುಂಜಿ, ಶವ ಸಂಸ್ಕಾರ, ಕಾಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಆದರೆ ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ನಿಷೇದಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಆದೇಶಿಸಿದ್ದಾರೆ

ಈ ನಿಷೇದಾಜ್ಞೆಯು ಸರ್ಕಾರವು ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಟಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here