ಜಿಲ್ಲೆಯಲ್ಲಿ 15ಲಕ್ಷ ಮತದಾರರು , 11 ಸಾವಿರ ಸಿಬ್ಬಂದಿ ನಿಯೋಜನೆ

0

ನಾಳೆ ಬೆಳಗ್ಗೆ 7ಗಂಟೆಯಿಂದ ಸಂಜೆ 6ರ ವರೆಗೆ ಆಯಾ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯಲ್ಲಿ ಒಟ್ಟು 14,99,917 ಮತದಾರರು ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದು, ಇದರಲ್ಲಿ ಒಟ್ಟು 73 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ 643 ಸೂಕ್ಷ್ಮ ಮತಗಟ್ಟೆಗಳು, 10 ಅತಿ ಸೂಕ್ಷ್ಮ ಮತಗಟ್ಟೆಗಳು ಹಾಗೂ 1007 ವೆಬ್‌ ಕಾಸ್ಟಿಂಗ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 2000 ಮತಗಟ್ಟೆಗಳಿದ್ದು, ಶ್ರವಣಬೆಳಗೊಳ- 273, ಅರಸೀಕೆರೆ – 276, ಬೇಲೂರು – 273, ಹಾಸನ – 279, ಹೊಳೆನರಸೀಪುರ 325, ಅರಕಲಗೂಡು 287, ಸಕಲೇಶಪುರ – 287 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

11 ಸಾವಿರ ಸಿಬ್ಬಂದಿ ನಿಯೋಜನೆ

ನಾಳೆ ನಡೆಯುವ ಮತದಾನ ಪ್ರಕ್ರಿಯೆಗೆ ಈಗಾಗಲೇ ಜಿಲ್ಲೆಯಾದ್ಯಂತ 10910 ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇದರಲ್ಲಿ 2182 ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, 2182 ಮೊದಲನೇ ಮತಗಟ್ಟೆ ಅಧಿಕಾರಿ, 2182 2ನೇ ಮತಗಟ್ಟೆ ಅಧಿಕಾರಿ, 2182 ಮೂರನೇ ಮತಗಟ್ಟೆ ಅಧಿಕಾರಿ, 2182 ನಾಲ್ಕನೇ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಚುನಾವಣೆಗೆ 904 ವಾಹನಗಳ ಬಳಕೆ

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಮತಪೆಟ್ಟಿಗೆ ತೆಗೆದುಕೊಂಡು ಹೋಗಲು ಮತ್ತು ಭದ್ರತೆ ಸೇರಿದಂತೆ ಇನ್ನಿತರೆ ಕೆಲಸಗಳಿಗೆ ಒಟ್ಟು 904 ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ 299 ಸರ್ಕಾರಿ ಬಸ್‌ಗಳು, 303 ಜೀಪುಗಳು, 90 ಮ್ಯಾಕ್ಸಿಕ್ಯಾಬ್‌ಗಳು, 209 ಕಾರು ಮತ್ತು ಜೀಪುಗಳನ್ನು ಮತ್ತು 43 ಮ್ಯಾಕ್ಸಿಕ್ಯಾಬ್‌ಗಳನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು 23 ಸಿಎಪಿಎಫ್ ತುಕಡಿ ಬಂದಿವೆ. ಏಳೂ ಕ್ಷೇತ್ರಗಳಿಗೂ ತಲಾ ಒಂದರಂತೆ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ನಮ್ಮ ಜಿಲ್ಲೆಯ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಹೊರಗಿನಿಂದ 1700 ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಚೆಕ್‌ಸ್ಟ್ ಕಾರ್ಯ ನಿರ್ವಹಿಸುತ್ತಿವೆ.

ನಿಷೇಧಾಜ್ಞೆ ಜಾರಿ

ಮೇ10 ರಂದು ಬೆಳಗ್ಗೆ 6 ಗಂಟೆಯಿಂದ ಮೇ 11ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಲ್ಲಿ ಚುನಾವಣೆಯ ಶಾಂತಿಯುತವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು 144ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ .

ಮತದಾರರ ಗುರುತಿನ ಚೀಟಿ ಹೊರತುಪಡಿಸಿ ಇತರೆ ದಾಖಲೆ

ಮತದಾರರು ತಮ್ಮ ಮತ ಚಲಾಯಿಸಲು ಮತಗಟ್ಟೆಗೆ ಬಂದಾಗ ಭಾರತ ಚುನಾವಣಾ ಆಯೋಗವು ನೀಡಿರುವ ಭಾವಚಿತ್ರವುಳ್ಳ ಮತದಾರರ ಚೀಟಿ ಮತದಾನ ಅಧಿಕಾರಿಗಳಿಗೆ ತೋರಿಸುವುದು ಕಡ್ಡಾಯವಾಗಿದೆ ಒಂದು ಪಕ್ಷ ಯಾವುದೇ ಕಾರಣದಿಂದ ಗುರುತಿನ ಚೀಟಿ ಲಭ್ಯವಿಲ್ಲದಿದ್ದಲ್ಲಿ ಪರ್ಯಾಯವಾಗಿ ಪಾಸ್ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಆದಾಯ ತೆರಿಗೆ ಗುರುತಿನ ಚೀಟಿ, (ಪಾನ್ ಕಾರ್ಡ್), ಆಧಾರ್ ಕಾರ್ಡ್, ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರದ ಪಾಸ್ ಪುಸ್ತಕವನ್ನು ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬಹುದಾಗಿದೆ .

ಮೇ 13 ಕ್ಕೆ ಫಲಿತಾಂಶ

LEAVE A REPLY

Please enter your comment!
Please enter your name here