ಹಾಸನ : ಅರಸೀಕೆರೆ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಭಾರಿ ಕಾವು ಪಡೆಯುತ್ತಿದ್ದು, ನಿನ್ನೆ ರಾತ್ರಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದೋಗಿದೆ , ತಾಲ್ಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಿನ್ನೆ ( 28Apr2023 ) ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡರ ಪರ ಪ್ರಚಾರಕ್ಕೆ ತೆರಳಿದ್ದ ಅವರ ಪತ್ನಿ ಮತ್ತು
ಪುತ್ರ ಅವರ ಸಮ್ಮುಖದಲ್ಲಿ ಈ ಅವಘಡ ನಡೆದಿದೆ ಎನ್ನಲಾಗಿದೆ . , ಪ್ರಚಾರ ನಡೆಸುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬಾತ ರಾತ್ರಿ ಸಮಯದಲ್ಲಿ ಯಾಕಿಷ್ಟು ಜೋರಾಗಿ ಜೈಕಾರ ಹಾಕಿಕೊಂಡು ಪ್ರಚಾರ ಮಾಡುತ್ತೀರಾ ? ಎಂದು ಪ್ರಶ್ನಿಸಿದಾಗ, ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. , ಎನ್ನಲಾಗಿದೆ ,ಈ ಸಂದರ್ಭದಲ್ಲಿ
ಕಾಂಗ್ರೆಸ್‌ನ ಯುವಕರ ಗುಂಪು ಕಿರಣ್ ಅವರ ಮೇಲೆ ಹಲ್ಲೆ ಮಾಡಿದೆ.ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ನಂತರ ತಕ್ಷಣವೇ ಹಲ್ಲೆಗೊಳಗಾದ ಕಿರಣ್ ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.