ಈಜಲು ಹೋದ ಯುವಕನ ತಲೆಗೆ ತೀವ್ರ ಪೆಟ್ಟು ಬಿದ್ದು ಸಾವು

0

ಈಜಲು ಹೋದ ಯುವಕನ ತಲೆಗೆ ತೀವ್ರ ಪೆಟ್ಟು ಬಿದ್ದು ಸಾವು
ಸಕಲೇಶಪುರ: ಜಲಪಾತದಲ್ಲಿ ಈಜಲು ಹೋದ ಯುವಕನೋರ್ವನ ತಲೆಗೆ ತೀವ್ರ ಪೆಟ್ಟು ಬಿದ್ದಿರುವ ಘಟನೆ ತಾಲೂಕಿನ ಮೂಕನ ಮನೆ ಜಲಪಾತದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕೆ.ಎನ್.ನಿಂಗರಾಜ್ (17) ಮೃತಪಟ್ಟ ದುರ್ದೈವಿಯಾಗಿದ್ದು ಬೆಂಗಳೂರಿನ ರಾಜಾಜಿನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೆಂದು ತಿಳಿದು ಬಂದಿದೆ.

ಘಟನೆಯ ವಿವರ: ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಸರಾಂತ ಮೂಕನಮನೆ ಜಲಪಾತಕ್ಕೆ ತನ್ನ ಕಾಲೇಜಿನ ಸಹಪಾಠಿಗಳು ಹಾಗೂ ಕಾಲೇಜಿನ ಕೆಲವು ಸಿಬ್ಬಂದಿಗಳ ಜೊತೆಗೆ ಪ್ರವಾಸಕ್ಕೆ ಬಂದಿದ್ದು ತನ್ನ ಸಹಪಾಠಿಗಳ ಜಲಪಾತದಲ್ಲಿ ಶನಿವಾರ ಮಧ್ಯಾಹ್ನ ಈಜಲು ತೆರಳಿದ್ದಾನೆ. ಈ ವೇಳೆ ನೀರಿನ ಸುಳಿಗೆ ಸಿಕ್ಕಿ ಕೊಚ್ಚಿ ಹೋಗಿ ಬಂಡೆಯೊಂದಕ್ಕೆ ತಲೆ ಅಪ್ಪಳಿಸಿದ ಪರಿಣಾಮ ತೀವ್ರ ಪೆಟ್ಟು ಬಿದ್ದಿದೆ. ಇವನನ್ನು ರಕ್ಷಿಸಲು ಸಮೀಪದಲ್ಲಿದವರು ತೀವ್ರ ಪ್ರಯತ್ನಿಸಿದರೂ ಸಹ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ನಂತರ ಪೊಲಿಸರು,ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮೃತ ದೇಹವನ್ನು ನೀರಿನಿಂದ ಹೊರ ತೆಗೆಯಲಾಯಿತು.

ಈ ಸಂದರ್ಭದಲ್ಲಿ ಸ್ನೇಹಿತರ ಆಕ್ರಂಧನ ಮುಗಿಲು ಮುಟ್ಟಿತ್ತು. ನಂತರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಲಾಯಿತು. ಸ್ಥಳಕ್ಕೆ ಯಸಳೂರು ಪಿಎಸ್ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here