BREAKING NEWS NOW , Nandini Milk Price Hiked 2₹/Ltr

0

ಬೆಂಗಳೂರು / ಹಾಸನ : ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆ ನಡೆಯಿತು , ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು

ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. , ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ

ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. , ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.

LEAVE A REPLY

Please enter your comment!
Please enter your name here