ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ, ಶಾಂತಿ ಕದಡುವ ಸಾಧ್ಯತೆ ಇಬ್ಬರ ಬಂಧನ

0

ಹಾಸನ: ದೇಶಾದ್ಯಂತ ಎನ್‌ಐಎ ದಾಳಿ ನಡೆಸಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಮುಖಂಡರನ್ನು ಬಂಧಿಸಿದ ನಂತರ ಪ್ರತಿಭಟನೆ, ಶಾಂತಿ ಕದಡೋ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲೂ ಮುನ್ನೆಚ್ಚರಿಕೆಯಾಗಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.
ಎಸ್‌ಡಿಪಿಐ ಜಿಲ್ಲಾದ್ಯಕ್ಷ ಸಿದ್ಧಿಕ್ ಆನೆಮಹಲ್ ಮತ್ತು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಫರೀಧ್ ಎಂಬುವರನ್ನು ಪೊಲೀಸರ ವಶಕ್ಕೆ
ಪಡೆದಿದ್ದಾರೆ.
ಗೃಹ ಇಲಾಖೆ ಸೂಚನೆ ಮೇರೆಗೆ

ಈ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ. ಕಳೆದ ರಾತ್ರಿ ಸಕಲೇಶಪುರ ಸಿಪಿಐ ನೇತೃತ್ವದಲ್ಲಿ ಸಿದ್ಧಿಕ್ ಅವರನ್ನು ವಶಕ್ಕೆ ಪಡೆದು ಸಕಲೇಶಪುರ ಉಪ ವಿಭಾಗಾದಿಕಾರಿ ಎದುರು ಸ್ಥಳೀಯ ಪೊಲೀಸರು ಹಾಜರು ಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಎನ್‌ಐಎ ದಾಳಿ ಬಳಿಕ ಶಾಂತಿ ಕದಡುವ ಚಟುವಟಿಕೆ ನಡೆಯುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಇವರನ್ನು ಬಂಧಿಸಲಾಗಿದೆ ಎಂದರು. ಹರಿರಾಮ್ ಶಂಕರ್ ತಿಳಿಸಿದ್ದಾರೆ
ಇಬ್ಬರನ್ನು ವಶಕ್ಕೆ ಪಡೆದು ಮ್ಯಾಜಿಸ್ಟೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:

ಇನ್ನು ಚುನಾವಣೆ ಬಂದಾಗ ಇಂತಹ ದಾಳಿ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಕೆ.ಗೋಪಾಲಯ್ಯ, ದೇಶದ ವಿದ್ವಂಸಕ ಕೃತ್ಯಗಳಲ್ಲಿ ಯಾರು ಭಾಗಿಯಾಗಿದ್ದಾರೆ, ಮುಂದೆ ಇಂಥ ಕೃತ್ಯಗಳು ನಡೆಯಬಾರದು ಎಂದು ಪೊಲೀಸ್ ಹಾಗೂ ಗುಪ್ತಚರ ಇಲಾಖೆ ತನಿಖೆ ಮಾಡಿ ಕ್ರಮ ಕೈಗೊಳ್ಳಲಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರವೂ ಕಠಿಣ ಕ್ರಮ ಜರುಗಿಸಲಿದೆ ಎಂದು ಹೇಳಿದರು.
ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆ ನಿಷೇಧ ವಿಚಾರವಾಗಿ ಕೇಳಿದ ಪ್ರಶ್ನೆಗೆ

ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದಷ್ಟೇ ಹೇಳಿದರು.
ಬರೀ ಕರ್ನಾಟಕದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಇಡೀ ದೇಶದಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದರು.

ರಾಜ್ಯ, ದೇಶದಲ್ಲಿ ಯಾರೆಲ್ಲಾ ದುಷ್ಕ್ರತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರ ಬಗ್ಗೆ ಉಭಯ ಸರ್ಕಾರಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿವೆ. ವರದಿ ಬಂದವರನ್ನು ಅರೆಸ್ಟ್ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳುವ ಕೆಲಸ ಆಗಲಿದೆ. ಈ ದೇಶದಲ್ಲಿ ಯಾವುದೇ ವಿದ್ವಂಸಕ ಕೃತ್ಯ ಆಗಬಾರದು.
-ಕೆ.ಗೋಪಾಲಯ್ಯ, ಉಸ್ತುವಾರಿ ಸಚಿವ

ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ, ಶಾಂತಿ ಕದಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಿದ್ದಿಕ್ ಆನೆಮಹಲ್, ಪ್ರಧಾನ ಕಾರ್ಯದರ್ಶಿ ಸೈಯದ್ ಫರೀದ್ ಬಂಧಿತರು.

ಇದೇ ರೀತಿ ಹಾಸನ ಜಿಲ್ಲಾ ಪೊಲೀಸರ ಸಹಕಾರದಿಂದ ಕೊಡಗು ಪೊಲೀಸರು ಅಫ್ಸರ್ ಕೊಡ್ಲಿಪೇಟೆ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವಿವಿಧೆಡೆ ಶಾಂತಿ ಕದಡುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತೆಯಾಗಿ ಈ ಕ್ರಮ ಅನುಸರಿಸಲಾಗಿದೆ.
-ಹರಿರಾಮ್ ಶಂಕರ್, ಎಸ್ಪಿ

LEAVE A REPLY

Please enter your comment!
Please enter your name here