ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಕಾರ್ಯಕ್ರಮ: ಜಿಲ್ಲಾಧಿಕಾರಿ ಸತ್ಯಭಾಮಾ
ಹಾಸನ: ಮುಖ್ಯಮಂತ್ರಿ ನಿರ್ದೇಶನ ದಂತೆ ಸೆ.25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಂಕೀರ್ಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ
ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪೂರ್ವಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ
ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ತಹಶೀಲ್ದಾರರು ಹಾಜರಿರಲಿದ್ದಾರೆ. ಸಾರ್ವಜನಿಕರು ಕುಂದು ಕೊರತೆ ನಿವಾರಣಾ ವ್ಯವಸ್ಥೆ (IPGRS) https://ipgrs.karnataka.gov.in ತಂತ್ರಾಂಶದಲ್ಲಿ ಸ್ಥಳದಲ್ಲಿಯೇ ಕಂಪ್ಯೂಟರ್ ಮೂಲಕ ಅರ್ಜಿ ಮಾಹಿತಿ ದಾಖಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೋಂದಾಯಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ
-ಜಿಲ್ಲಾಧಿಕಾರಿ ಸಿ.ಸತ್ಯಭಾಮಾ